ಧಾರವಾಡ: ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಬಿಜೆಪಿ ಹಿರಿಯ ಮುಖಂಡ ತವನಪ್ಪ ಅಷ್ಟಗಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾಡಿದ ಅವರು ಮುಂಬರುವ ಎರಡು ದಿನಗಳಲ್ಲಿ ಅಭಿಮಾನಿಗಳ ಸಭೆ ಕರೆದು ಚರ್ಚಿಸಿ ಮುಂದಿನ ನಡೆ ತೀರ್ಮಾನ ಕೈಗೊಳ್ಳುವುದಾಗಿ ಅಷ್ಟಗಿ ಹೇಳಿದ್ದಾರೆ.

ಬಿಜೆಪಿ ಪಕ್ಷದಿಂದ ನನಗೆ ವೈಯಕ್ತಿಕ ಮತ್ತು ಜೈನ್ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಅಷ್ಟಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಮುಂಚೂಣಿಯಲ್ಲಿದ್ದರಲ್ಲದೇ ವರಿಷ್ಠರು ಸಹ ಬುಲಾವ್ ನೀಡಿ ದಿಲ್ಲಿಗೆ ಕರೆಸಿಕೊಂಡಿದ್ದರು.

ಅಂತಿಮ ಹಂತದಲ್ಲಿ ಟಿಕೆಟ್ ನಿರಾಕರಿಸಿ ಮತ್ತೆ ಹಾಲಿ ಶಾಸಕರಿಗೆ ಟಿಕೆಟ್ ನೀಡಿರುವುದು ಅಷ್ಟಗಿಯವರನ್ನು ಕೆರಳಿಸಿದ್ದು ಪಕ್ಷೇತರರಾಗಿ ಸ್ಪರ್ಧೆಗಿಳಿಯಲಿದ್ದು ಉಳಿದ ಆಕಾಂಕ್ಷಿಗಳು ಅವರನ್ನೇ ಬೆಂಬಲಿಸುವ ಸಾಧ್ಯತೆಗಳಿವೆ.


