ಧಾರವಾಡ: ಕ್ಷೇತ್ರದ ಅಭಿವೃದ್ಧಿ ನಿರೀಕ್ಷಿಸಿ ಮತದಾರರು ತಮ್ಮನ್ನು ಬೆಂಬಲಿಸಿದ್ದಾರೆ ಎಂದು ಕಲಘಟಗಿ ಕ್ಷೇತ್ರದಿಂದ ಆಯ್ಕೆಯಾದ ಸಂತೋಷ ಲಾಡ್ ಪ್ರತಿಕ್ರಿಯಿಸಿದರು.
ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಾಧ್ಯಮದವರ ಜೊತೆ ಮಾತ ನಾಡಿದ ಅವರು, ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತದ ಅಭಿವೃದ್ಧಿ ಕುಂಠಿತಗೊಂಡಿತ್ತು. ಬಿಜೆಪಿಯ ಆಡಳಿತದಿಂದ ಬೇಸತ್ತು ಜನ ತಮಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ತಮಗೆ ಅಶೀರ್ವಾದಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಪಕ್ಕದ ಕ್ಷೇತ್ರದಲ್ಲಿ ವಿನಯ ಕುಲಕರ್ಣಿ ಅವರು ಗೆಲುವು ಸಾಧಿಸಿದ್ದು ಸಂತಸ ತಂದಿದೆ. ಅವರು ಕ್ಷೇತ್ರದಲ್ಲಿ ಇರದಿದ್ದರೂ ಜನರು ಅವರನ್ನು ಗೆಲ್ಲಿಸಿದ್ದು ಅವರ ಮೇಲೆ ಜನರು ಇಟ್ಟಿರುವ ಪ್ರೀತಿಗೆ ಸಾಕ್ಷಿಯಾಗಿದೆ. ವಿನಯ ಕುಲಕರ್ಣಿ ಅವರನ್ನು ಬೆಂಬಲಿಸಿದ ಆ ಕ್ಷೇತ್ರದ ಜನರಿಗೂ ಕೃತಜ್ಞತೆ ಸಲ್ಲಿಸುತ್ತೆನೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಸೋಲು ಆಶ್ಚರ್ಯ ತರಿಸಿದೆ ಎಂದರು. ಶಾಸಕಾಂಗ ಪಕ್ಷದ ಸಭೆಗೆ ಬರುವಂತೆ ಈಗಾಗಲೇ ತಮಗೆ ಸೂಚನೆ ಬಂದಿದೆ. ಹೀಗಾಗಿ ಇಂದು ರಾತ್ರಿ ಬೆಂಗಳೂರಗೆ ತೆರಳುತ್ತಿದ್ದೆನೆ. ತಮಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಪ್ರಶ್ನೆಯೊಂಧಕ್ಕೆ ಉತ್ತರಿಸಿದರು.
ಚುನಾವಣೆ ಸಂದರ್ಭದಲ್ಲಿ ತಮ್ಮ ಮಾತಿನಿಂದ ಯಾರದಾದರು ಮನಸ್ಸಿಗೆ ನೋವಾಗಿದ್ದರೆ ಅವರಲ್ಲಿ ಕ್ಷಮೆ ಕೇಳುವುದಾಗಿ ಹೇಳಿದರು.