ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿ-ಧಾರವಾಡಕ್ಕೆ ’ಮಹಿಳಾ ಸಿಂಗಂ’ ಪೊಲೀಸ್ ಆಯುಕ್ತ

ಹುಬ್ಬಳ್ಳಿ: ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಹುದ್ದೆಗೆ ಕೊನೆಗೂ ಇಂದು ತಾರ್ಕಿಕ ಅಂತ್ಯ ಕಂಡಿದೆ.
ರಾಜ್ಯ ಸರ್ಕಾರ ಇಂದು ಹು-ಧಾ ಪೊಲೀಸ್ ಕಮಿಷನರೇಟ್‌ಗೆ ಮಹಿಳಾ ಐಪಿಎಸ್ ಅಧಿಕಾರಿಯಾಗಿರುವ ರೇಣುಕಾ ಸುಕುಮಾರಿ ಅವರನ್ನು ನೇಮಕ ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ.


ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ, 2011ರ ಐಪಿಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ರೇಣುಕಾ ಅವರನ್ನು ನೇಮಕ ಮಾಡಲಾಗಿದೆ.
ರೇಣುಕಾ ಸುಕುಮಾರ ಅವರು ಗೃಹ ರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆಯೂ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಆಗಿ ಸಹ ಕಾರ್ಯನಿರ್ವಹಿಸಿದ್ದರು.
ಹು-ಧಾ ಇತಿಹಾಸದಲ್ಲಿಯೇ ರೇಣುಕಾ ಸುಕುಮಾರ ಅವರು ಪ್ರಥಮ ಮಹಿಳಾ ಪೊಲೀಸ್ ಆಯುಕ್ತೆಯಾಗಿ ನೇಮಕಗೊಂಡಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *