ಹುಬ್ಬಳ್ಳಿ-ಧಾರವಾಡ ಸುದ್ದಿ

ಕೆಸಿಸಿ ಬ್ಯಾಂಕ್‌ಗೆ ಶಿವಕುಮಾರಗೌಡ ಅಧ್ಯಕ್ಷ

ಉಪಾಧ್ಯಕ್ಷರಾಗಿ ಮರಿಗೌಡರ-ಅವಿರೋಧ ಆಯ್ಕೆ

ಧಾರವಾಡ : ಇಲ್ಲಿನ ಕೆಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಗರದ ಸುಭಾಸ ರಸ್ತೆಯಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಜರುಗಿ ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡ ಶಿವಕುಮಾರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ನಿಂಗನಗೌಡ ಮರಿಗೌಡರ ಅವಿರೋಧವಾಗಿ ಆಯ್ಕೆಯಾದರು.


ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಇಬ್ಬರೂ ಅವಿರೋಧ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಶಾಅಲಂ ಹುಸೇನ ಪ್ರಕಟಿಸಿದರು. ಬ್ಯಾಂಕಿನ ಎಲ್ಲ ನಿರ್ದೇಶಕರು, ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ ಡಾ.ದೊಡ್ಡ ಪ್ಪ ಹೂಗಾರ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇತರರು ಉಪಸ್ಥಿತರಿದ್ದರು.


ಬ್ಯಾಂಕ್ ನ ಹಿತದೃಷ್ಟಿಯಿಂದ ಆಡಳಿತ ಮಂಡಳಿಯ ಎಲ್ಲ ಸದಸ್ಯರು ಚರ್ಚಿಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆರನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಿವಕುಮಾರಗೌಡ, ಈ ಹಿಂದೆ ಬ್ಯಾಂಕಿನ ಅಧ್ಯಕ್ಷರಾಗಿ ಆಗಿ ಕಾರ್ಯನಿರ್ವಹಿಸಿದ್ದಾರೆ.


ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯಕ್ಷೇತ್ರ ಹೊಂದಿರುವ ಬ್ಯಾಂಕ್ ನ ನೂತನ ಆಡಳಿತ ಮಂಡಳಿ ಇದೀಗ ಅಸ್ತಿತ್ವಕ್ಕೆ ಬಂದಂತಾಗಿದೆ.

 

administrator

Related Articles

Leave a Reply

Your email address will not be published. Required fields are marked *