ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸವದತ್ತಿ ರಸ್ತೆಯಲ್ಲಿನ ರೇಣುಕಾನಗರದಲ್ಲಿ ನಡೆದಿದೆ.
ಚಂದ್ರಕಾಂತ ಸಾವಳಗಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ನೌಕರನಾಗಿದ್ದಾನೆ. ಇತ್ತೀಚೆಗೆ ನಡೆದ ಕರ್ನಾಟಕ ವಿಶ್ವವಿದ್ಯಾಲಯ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಾವಳಗಿ, ಚುನಾವಣೆಯಲ್ಲಿ ಪರಾಭವಗೊಂಡಿದ್ದರು.
ಚುನಾವಣೆಯಲ್ಲಿನ ಸೋಲಿನ ಹತಾಶೆಯಿಂದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.