ಹುಬ್ಬಳ್ಳಿ-ಧಾರವಾಡ ಸುದ್ದಿ
ನುಡಿದಂತೆ ನಡೆದ ’ಡಿಸಿ’

ನುಡಿದಂತೆ ನಡೆದ ’ಡಿಸಿ’

500 ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮಕ್ಕೆ ಸಚಿವ ಸಂತೋಷ ಲಾಡ್ ಸಾಥ್

ಧಾರವಾಡ: ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮಹಿಳೆಯರಿಗೆ ಇಂದು ಸಂಜೆ 4 ಗಂಟೆಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ.
ಕರ್ನಾಟಕ ಕಾಲೇಜು ರಸ್ತೆಯಲ್ಲಿನ ಸರಕಾರಿ ನೌಕರರ ಭವನದಲ್ಲಿ ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಅವರ ನೇತೃತ್ವದಲ್ಲಿ ಕ್ಷೇತ್ರದ ಸುಮಾರು 500 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ.


ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಅವರು, ಮಹಿಳೆಯರನ್ನು ಆರ್ಥಿಕವಾಗಿ ಬಲಪಡಿಸುವ ಮೂಲಕ ಸ್ವಾವಲಂಬಿಯಾಗಿ ಮಾಡಲು ತೀರ್ಮಾಸಿದ್ದರು.


ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರು ಹೊಲಿಗೆ ಯಂತ್ರಗಳನ್ನು ವಿತರಿಸಲು ಮುಂದಾಗಿದ್ದರು. ಆದರೆ, ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿತ್ತು.
ಆದರೆ, ಸ್ಥಗಿತಗೊಂಡಿದ್ದ ವಿತರಣಾ ಕಾರ್ಯವನ್ನು ಈಗ ಕೈಗೆತ್ತಿಕೊಳ್ಳುವ ಮುಖಾಂತರ ತಾವು ನೀಡಿದ್ದ ಭರವಸೆಯನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಅನುಭವಿಸಿದರು ಸಹ ತಾವು ನೀಡಿದ ಭರವಸೆ ಈಡೇರಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರದ ತರಹ ಚಿಂಚೋರೆ ಅವರು ನುಡಿದಂತೆ ನಡೆದಿದ್ದಾರೆ.

administrator

Related Articles

Leave a Reply

Your email address will not be published. Required fields are marked *