ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಭಾಜಪ ಪಕ್ಷವು ಉದ್ದೇಶ ಪೂರ್ವಕವಾಗಿ ಲಿಂಗಾಯತ ನಾಯಕರನ್ನು ಕಡೆ ಗಣಿಸಿದೆ ಅಲ್ಲದೆ ಮತ್ತೊಂದು ಕಡೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲಿಂಗಾಯತ ನಾಯಕರನ್ನು ಮೂಲೆ ಗುಂಪು ಮಾಡಿರುವುದು ವಾಸ್ತವವಾಗಿದೆ. ಆದರಿಂದ ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಪಕ್ಷಕ್ಕೆ ಸ್ವಾಮೀಜಿಗಳು ಬೆಂಬಲ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮನವಿ ಮಾಡಿದ್ದಾರೆ.

ಆದ್ರೆ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಮೂರು ಜನ ಲಿಂಗಾಯತ ನಾಯಕರಿಗೆ ಟಿಕೆಟ್ ನೀಡಿತ್ತು ಅಲ್ಲದೆ ಸೋತ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿತ್ತು. ಇದೀಗ ಶೆಟ್ಟರ್ ಅವರಿಂದ ತೆರವಾಗಿರುವ ಪರಿಷತ್ ಸ್ಥಾನವನ್ನು ಕೂಡ ಜಿಲ್ಲೆಯ ಲಿಂಗಾಯತ ನಾಯಕರಿಗೆ ನೀಡುವ ಮಾತನ್ನು ಕಾಂಗ್ರೆಸ್ ಹೈ ಕಮಾಂಡ್ ನೀಡಿದ್ದು ಲಿಂಗಾಯತ ನಾಯಕತ್ವಕ್ಕೆ ವಿಶೇಷ ಮನ್ನಣೆ ನೀಡುತ್ತಿದೆ. ಅಲ್ಲದೆ ಮುಂದೆಯೂ ನೀಡಲಿದೆ ಎಂದು ಹೇಳಿದ್ದಾರೆ.


