ಹುಬ್ಬಳ್ಳಿ-ಧಾರವಾಡ ಸುದ್ದಿ
ಪಾಲಿಕೆ ಚುನಾವಣೆಗೆ ಬಿಜೆಪಿ ರೆಡಿ;ಸಂಘಟನೆ ಸಜ್ಜುಗೊಳಿಸಲು ವಾರದ ಗಡುವು

ಪಾಲಿಕೆ ಚುನಾವಣೆಗೆ ಬಿಜೆಪಿ ರೆಡಿ;ಸಂಘಟನೆ ಸಜ್ಜುಗೊಳಿಸಲು ವಾರದ ಗಡುವು

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿಂದು ನಾಲ್ಕು ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಮಹತ್ವದ ಸಭೆ ನಡೆಯುವುದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಗಸ್ಟ ತಿಂಗಳಲ್ಲೇ ನಡೆಯುವುದು ಮತ್ತಷ್ಟು ಪಕ್ಕಾ ಆದಂತಾಗಿದೆ. ಸಭೆ ಉದ್ದೇಶಿಸಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆಯ ೮೨ ವಾರ್ಡಗಳ ಚುನಾವಣೆಗೆ ಸಂಘಟನಾತ್ಮಕವಾಗಿ ಸಜ್ಜಾಗಿ ಎಂದು ಕರೆ ನೀಡಿದರು. ಮಹಾನಗರ ವ್ಯಾಪ್ತಿಯಲ್ಲಿ ಬರುವ ನೂತನ ೮೨ ವಾರ್ಡಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಿ ಎಲ್ಲ ವಾರ್ಡಗಳಲ್ಲಿ ೮೦೫ ಬೂತ್ ಮಟ್ಟದ ಸಮಿತಿ, ಪಂಚರತ್ನರ ಸಮಿತಿ, ಪೇಜ್ ಪ್ರಮುಖರ ನೇಮಕಾತಿ ಒಂದು ವಾರದಲ್ಲಿ ಪೂರ್ಣಗೊಳ್ಳಬೇಕು ಎಂದದರು. ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡಗಳಲ್ಲಿ ಸಂಘಟನಾತ್ಮಕ ಚಟುವಟಿಕೆಗಳು ಹೆಚ್ಚೆಚ್ಚು ನಡೆಯಬೇಕು. ಈಗಾಗಲೆ ಕೋವಿಡ್ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಜನರಿಗೆ ಸಾಕಷ್ಟು ಸಹಾಯ ಸಹಕಾರ ನೀಡಿದ್ದು ಶ್ಲಾಘನೀಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯ ದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸೇವಾಹಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು. ವಿಭಾಗ ಸಂಘಟನಾ ಕಾರ್ಯದರ್ಶಿ ರಾಜಕುಮಾರ ಬಸವಾ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿಜಯಾನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ, ತಿಪ್ಪನ್ನ ಮಜ್ಜಗಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಪೂರ್ವದ ಪ್ರಭು ನವಲಗುಂದಮಠ, ೭೪ರ ಅಧ್ಯಕ್ಷ ಬಸವರಾಜ ಗರಗ, ೭೧ರ ಅಧ್ಯಕ್ಷ ಸುನೀಲ ಮೊರೆ, ಪಕ್ಷದ ವಕ್ತಾರ ರವಿ ನಾಯಕ ಸೇರಿದಂತೆ ಹಾಗೂ ಇತರರು ಇದ್ದರು.

administrator

Related Articles

Leave a Reply

Your email address will not be published. Required fields are marked *