ಹುಬ್ಬಳ್ಳಿ-ಧಾರವಾಡ ಸುದ್ದಿ
ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ;  ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ? ಸಂಜೆ ಅಥವಾ ನಾಳೆ ಅಂತಿಮ, ಬುಧವಾರ ಪ್ರಮಾಣ

ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ; ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ? ಸಂಜೆ ಅಥವಾ ನಾಳೆ ಅಂತಿಮ, ಬುಧವಾರ ಪ್ರಮಾಣ

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಇತರ ಮುಖಂಡರೊ0ದಿಗೆ ಸಂಜೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳ ಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ಇಂದು ಸಂಸತ್ ಭವನಕ್ಕೆ ತೆರಳುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಾಗುವುದು ಆದರೆ ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ. ಒಂದು ಸಮತೋಲಿತ ಸಂಪುಟವನ್ನು ರಚನೆ ಮಾಡಲಾಗುವುದೆಂದರು.
ಸAಪುಟ ವಿಸ್ತರಣೆಗಾಗಿ ಪಕ್ಷವು ಪ್ರಮುಖ ಸೂತ್ರವೊಂದನ್ನು ಸಿದ್ಧಪಡಿಸಲಿದೆ. ‘ಉಪ ಮುಖ್ಯಮಂತ್ರಿ ಯಾರಾಗಬೇಕು, ಎಷ್ಟು ಹಂತದಲ್ಲಿ ವಿಸ್ತರಣೆ ಆಗಬೇಕು, ಎಷ್ಟು ಜನ ಸಂಪುಟದಲ್ಲಿರಬೇಕು’ ಎಂಬುದು ಆ ಸೂತ್ರದ ಭಾಗ ಎಂದು ಅವರು ಹೇಳಿದರು.
ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಪ್ರಮುಖರನ್ನು ಹೊಸ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡು ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ಪ್ರಾದೇಶಿಕತೆ, ಜಾತಿ, ಹಿರಿತನಕ್ಕೆ ಆದ್ಯತೆ ನೀಡುವ ಬಗ್ಗೆ ವರಿಷ್ಠರೇ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸೋಮವಾರ ಸಂಜೆ ಅಥವಾ ಮಂಗಳವಾರ ವರಿಷ್ಠರು ಅಂತಿಮ ಪಟ್ಟಿಗೆ ಸಮ್ಮತಿ ಸೂಚಿಸಿದರೆ ಬುಧವಾರದ ವೇಳೆಗೆ ಹೊಸ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಇಲ್ಲದಿದ್ದರೆ ಸಮಾರಂಭ ಮತ್ತಷ್ಟು ವಿಳಂಬ ಆಗಲಿದೆ ಎಂದು ಅವರು ವಿವರಿಸಿದರು.

 

ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ?

ಹೊಸದಿಲ್ಲಿ: ತಮ್ಮ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್‌ಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.


ಸಚಿವ ಸಂಪುಟ ರಚನೆ ಕುರಿತಂತೆ ಈಗಾಗಲೇ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ ಅವರು ಇಂದು ನೂತನ ಸಚಿವರ ಪಟ್ಟಿಯೊಂದಿಗೆ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎನ್ನಲಾಗಿದ್ದು, ಈ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರು ಇದೆ ಎಂದು ಹೇಳಲಾಗುತ್ತಿದೆ.
ವಿಜಯೇಂದ್ರ ಸೇರ್ಪಡೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ದಿಲ್ಲಿಯಲ್ಲಿ ಉತ್ತರಿಸಿದ ಬೊಮ್ಮಾಯಿ ಈ ಬಗ್ಗೆ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

 

ಸಂಭ್ಯಾವರ ಪಟ್ಟಿ

ಗೋವಿಂದ ಕಾರಜೋಳ
ಆರ್.ಅಶೋಕ
ಅಶ್ವತ್ ನಾರಾಯಣ
ಮಾಧುಸ್ವಾಮಿ
ಬೈರತಿ ಬಸವರಾಜು
ಮುರುಗೇಶ ನಿರಾಣಿ
ಎಸ್.ಟಿ.ಸೋಮಶೇಖರ
ಬಿ.ಶ್ರೀರಾಮುಲು
ಉಮೇಶ ಕತ್ತಿ
ಬಾಲಚಂದ್ರ ಜಾರಕಿಹೋಳಿ
ಶಂಕರಪಾಟೀಲ ಮುನೇನಕೊಪ್ಪ
ಭಾರತಿ ಶೆಟ್ಟಿ
ಎಂ.ಪಿ.ಕುಮಾರಸ್ವಾಮಿ
ಅಪ್ಪಚ್ಚು ರಂಜನ್
ವಿ. ಸುನಿಲ್ ಕುಮಾರ
ಮಾಡಾಳು ವಿರುಪಾಕ್ಷಪ್ಪ
ಆನಂದ ಸಿಂಗ್
ಬಿ.ಸಿ.ಪಾಟೀಲ
ಡಾ.ಸುಧಾಕರ

administrator

Related Articles

Leave a Reply

Your email address will not be published. Required fields are marked *