ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಹಿತ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2021ರ ಡಿಸೆಂಬರ್ ಅಂತ್ಯದವರೆಗೆ ಮುಂದೂಡುವ ಸರ್ಕಾರದ ಯತ್ನಕ್ಕೆ ಹಿನ್ನೆಡೆಯಾಗಿದ್ದು ಆದಷ್ಟು ಶೀಘ್ರ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕೆಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ ಸೂಚಿಸಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವುದು ನಿಶ್ಚಿತವಾಗಿದೆ.
ಚುನಾವಣಾ ಆಯೋಗಕ್ಕೆ ಸ್ಪಷ್ಟ ನಿರ್ಧಾರಕ್ಕೆ ಸೂಚನೆ ನೀಡಿ ಎಂದು ವಿಚಾರಣೆಯನ್ನು ಆ.೧೩ಕ್ಕೆ ಮುಂದೂಡಿದ್ದು ಅಂದು ಚುನಾವಣೆ ವೇಳಾಪಟ್ಟಿ ವಿವರ ನೀಡಿ ಅಂದೇ ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಅವಧಿ ಸಂಸ್ಥೆಗಳ ಪೂರ್ಣಗೊಂಡಿರುವ ರಾಜ್ಯದ ಕೆಲ ನಗರ ಸ್ಥಳೀಯ “ಚುನಾವಣೆಗೆ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ಸಂಬಂಧಿಸಿದ ನಡೆಸಲು ಸರ್ಕಾರ, ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆ ಎ.ಎನ್.ಓಕ್ ನೇತೃತ್ವದ ವಿಭಾಗಿಯ ಪೀಠ ನಿನ್ನೆ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿರುವುದರಿಂದ ಯಾವುದೇ ಕಾರಣಕ್ಕೂ ಮುಂದೂಡುವ ಸಾಧ್ಯತೆಗಳಿಲ್ಲ ಎನ್ನಲಾಗುತ್ತಿದೆ.
ಈಗಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾಯಿತ ಅವಧಿ ಪೂರ್ಣಗೊಂಡಿದೆ. ಸಂವಿಧಾನದ ಪರಿಚ್ಛೇದ 243(ಯು) ಪ್ರಕಾರ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂದು ಈ ಹಿಂದೆಯೇ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದು, ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಅಲ್ಲದೇ ಚುನಾವಣೆ ಗಳನ್ನು ಮುಂದೂಡುವ ಸಂಬಂಧ ಸಚಿವ ಸಂಪಟ ಕೈಗೊಂಡಿರುವ ನಿರ್ಣಯಕ್ಕೆ ಚುನಾವಣಾ ಆಯೋಗ ಬದ್ಧವಾಗಿರಬೇಕೆಂದೇನೂ ಇಲ್ಲ ಎಂದು ಕೋರ್ಟ ಹೇಳಿರುವುದರಿಂದ ಚುನಾವಣೆ ದಿನಾಂಕ ಪ್ರಕಟಿಸಬೇಕಾದ ಅನಿವಾರ್ಯತೆ ಆಯೋಗಕ್ಕಿದೆ.
ಹಾಗಾಗಿ ಹೈಕೋರ್ಟ ಸೂಚನೆಯಂತೆ ದಿ.13ರಂದು ಹುಬ್ಬಳ್ಳಿ ಧಾರವಾಡ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣಾ ದಿನಾಂಕ ಪ್ರಕಟ ನಿಶ್ಚಿತವಾಗಿದೆ.
ತನ್ಮಧ್ಯೆ ವಾರ್ಡ ಮೀಸಲು, ಎಸ್ಸಿಗೆ ಅನ್ಯಾಯ ಕುರಿತ ಅರ್ಜಿಗಳ ವಿಚಾರಣೆಯನ್ನು ಧಾರವಾಡ ಹೈಕೋರ್ಟ ಪೀಠ ದಿ.9ಕ್ಕೆ ಮುಂದೂಡಿದೆ. ಸ್ವತಃ ಹೈಕೋರ್ಟ್ ಮುಖ್ಯ ನ್ಯಾಯಾಧೀಶರೇ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಎತ್ತಿಕೊಂಡಿರುವುದರಿಂದ ಇಲ್ಲಿ ತಡೆನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.