ಹುಬ್ಬಳ್ಳಿ-ಧಾರವಾಡ ಸುದ್ದಿ

ಗೋಕುಲ ರಸ್ತೆಯ ಫರ್ನಿಚರ್ ಅಂಗಡಿಗೆ ಬೆಂಕಿ: ಲಕ್ಷಾಂತರ ಹಾನಿ

ಹುಬ್ಬಳ್ಳಿ: ಗೋಕುಲ ರಸ್ತೆಯ ಇಂಡಸ್ಟ್ರೀಯಲ್ ಎಸ್ಟೇಟ್ ಮೊದಲನೆ ಗೇಟ್ ಬಳಿಯ ಫರ್ನಿಚರ್ ಗ್ರೇಸ್ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.


ಪ್ರಕಾಶ ಇರಕಲ್ ಎಂಬುವರಿಗೆ ಸೇರಿದ ಅಂಗಡಿಯೇ ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂ ಮೌಲ್ಯದ ಸೋಪಾಸೆಟ್, ಡೈನಿಂಗ್ ಟೇಬಲ್, ಕುರ್ಚಿಗಳು, ಬೆಡ್ ರೂಂ ಸೆಟ್, ಹಾಸಿಗೆಗಳು ಸೇರಿದಂತೆ ಬಹುತೇಕ ವಸ್ತುಗಳು ಸುಟ್ಟಿದ್ದು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ.


ಬೆಳಿಗ್ಗೆ ೬-೩೦ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ನೋಡಿ ಬೆಂಕಿ ಹತ್ತಿದ್ದು ಅರಿವಿಗೆ ಬಂದಿದ್ದು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಸುಮಾರು ೩ ಗಂಟೆಗೂ ಹೆಚ್ಚು ಕಾಲ ಶ್ರಮ ವಹಿಸಿ ಅಗ್ನಿಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಕಲಗುಟ್ಕರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ದೀಪಾವಳಿ ಹಬ್ಬದ ಪೂಜೆಯ ಸಂಭ್ರಮದಲ್ಲಿರುವಾಗಲೇ ಇಂದು ಬೆಳಿಗ್ಗೆ ಈ ಅವಘಡ ಸಂಭವಿಸಿದ್ದು ಶಾರ್ಟ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

administrator

Related Articles

Leave a Reply

Your email address will not be published. Required fields are marked *