ಹುಬ್ಬಳ್ಳಿ-ಧಾರವಾಡ ಸುದ್ದಿ
ಬಿಜೆಪಿಗೆ ’ಅರವಿಂದ’ ಗುಡ್ ಬೈ

ಬಿಜೆಪಿಗೆ ’ಅರವಿಂದ’ ಗುಡ್ ಬೈ

ಧಾರವಾಡ: ರಾಜ್ಯ ರೈತಮೋರ್ಚಾ ಕಾರ್ಯಕಾರಿಣಿ ಸದಸ್ಯ,ಹಿರಿಯ ಮುಖಂಡ ಅರವಿಂದ ಏಗನಗೌಡರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯಕರ್ತರನ್ನು ಮೂಲೆಗುಂಪು ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಪಕ್ಷದಲ್ಲಿನ ಇಂತಹ ಬೆಳವಣಿಗೆಗಳಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿರುವ ಅವರು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಕಳೆದ ಇಪತೈದು ವರ್ಷಗಳಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ತತ್ವ ಸಿದ್ಧಾಂತಗಳಡಿ ಕೆಲಸ ನಿರ್ವಹಿಸಿದ್ದು, ಈ ಸಂದರ್ಭದಲ್ಲಿ ನಡೆಸಿದ ಹೋರಾಟದಲ್ಲಿ ಅನೇಕ ಮೊಕದ್ದಮೆಗಳನ್ನು ಎದುರಿಸುತ್ತಿದ್ದು,
ಹಲವರ ವಿರೋಧ ಕಟ್ಟಿಕೊಂಡು ಪಕ್ಷ ವಹಿಸಿದ ಜವಾಬ್ದಾರಿ ನಿಬಾಯಿಸಿದ್ದರೂ ವ್ಯವಸ್ಥಿತವಾಗಿ ಮೂಲೆಗುಂಪು ಮಾಡುವ ಕಾರ್ಯ ನಡೆದಿದೆ ಎಂದಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *