ಹುಬ್ಬಳ್ಳಿ-ಧಾರವಾಡ ಸುದ್ದಿ

ಬಸ್ ನಿಲ್ದಾಣದಲ್ಲೇ ನೇಟು ಹಾಕಿಕೊಂಡ ಅಧಿಕಾರಿ

ಕಲಘಟಗಿ: ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಪಟ್ಟಣದ ಬಸ್ ನಿಲ್ದಾಣದ ಪಾಸ್ ವಿತರಣಾ ಕೇಂದ್ರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ನಿಲ್ದಾಣ ಅಧಿಕಾರಿಯಾಗಿರುವ ಹುಬ್ಬಳ್ಳಿಯವರಾದ ಸುಭಾಷ್ ಬುಲಬುಲೆ (56) ಎಂಬುವರೇ ಪಾಸ್ ಕೇಂದ್ರದಲ್ಲಿರುವ ಫ್ಯಾನಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾದವರಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿವ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಾರಿಗೆ ಘಟಕದ ನೌಕರರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಮೃತರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಶಾಸಕ ಸಿ.ಎಂ.ನಿಂಬಣ್ಣವರ ಸ್ಥಳಕ್ಕೆ ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳು ವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

 

 

administrator

Related Articles

Leave a Reply

Your email address will not be published. Required fields are marked *