ಹುಬ್ಬಳ್ಳಿ-ಧಾರವಾಡ ಸುದ್ದಿ

ಅಧಿವೇಶನಕ್ಕೆ ಬಿಸಿ ಬಿರುಗಾಳಿ

ಹುಬ್ಬಳ್ಳಿ : ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆಯಿಂದ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಬಿಟ್ ಕಾಯಿನ್ ಹಗರಣ, ಕಮಿಷನ್ ಸರ್ಕಾರ, ಮಳೆ ಹಾನಿ ಪರಿಹಾರ ನೀಡಿಕೆಯಲ್ಲಿ ವೈಫಲ್ಯ ಸೇರಿ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿಯದು ಚೊಚ್ಚಲ ಅಧಿವೇಶನವಾಗಿದ್ದು,ಈ ಅಧಿವೇಶನದಲ್ಲಿ ಮಂಡನೆಯಾಗಲಿರುವ ಮತಾಂತರ ನಿಷೇಧ ಕಾಯ್ದೆ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ತೀವ್ರ ಜಟಾಪಟಿಗೆ, ಮಾತಿನ ಸಮರಕ್ಕೆ ಕಾರಣವಾಗುವ ಸಾಧ್ಯತೆಗಳು ಇವೆ.
ಇನ್ನೊಂದೆಡೆ ಅಧಿವೇಶನಕ್ಕೆ ಈ ಬಾರಿಯೂ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ವಿವಿಧ ಸಂಘಟನೆ ಗಳ ಸಾವಿರಾರು ಕಾರ್ಯಕರ್ತರ ದಂಡೇ ಬೆಳಗಾವಿ ನಗರದತ್ತ ಹರಿದು ಬರುತ್ತಿದೆ. ಇದುವರೆಗೆ ಪ್ರತಿಭಟನೆಗೆ ಅವಕಾಶ ಕೋರಿ 75 ಅರ್ಜಿಗಳು ಸಲ್ಲಿಕೆಯಾಗಿವೆ.
ಅಲ್ಲದೇ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ತೀವ್ರ ಪ್ರತಿಭಟನೆಗಳ ಬಿಸಿ ಸಹ ತಟ್ಟಲಿದೆ. ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ವಿವಿಧ ಸಂಘಟನೆ ಗಳ ಸಾವಿರಾರು ಕಾರ್ಯಕರ್ತರ ದಂಡೇ ಕುಂದಾನಗರಿಯತ್ತ ಹರಿದು ಬರಲು ಸಜ್ಜಾಗುತ್ತಿದೆ. ಇದುವರೆಗೆ ಪ್ರತಿಭಟನೆಗೆ ಅವಕಾಶ ಕೋರಿ 75 ಅರ್ಜಿಗಳು ಸಲ್ಲಿಕೆಯಾಗಿವೆ.
ಹತ್ತು ದಿನಗಳ ಕಾಲ ಅಧಿವೇಶನದಲ್ಲಿ ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಆದ್ಯತೆ ನೀಡುವುದಾಗಿ ಸಿಎಂ ಹೇಳಿದ್ದಾರೆ.
ಪ್ರತಿಭಟನೆ ನಡೆಸುವವರಿಗಾಗಿ ಸುವರ್ಣ ಗಾರ್ಡನ್ ಬಳಿ ಈಗಾಗಲೇ 7 ಟೆಂಟ್‌ಗಳನ್ನು ಹಾಕಲಾಗಿದ್ದು, ಕಾನೂನುಬದ್ದವಾಗಿ ಪ್ರತಿಭಟನೆಗೆ ಅವಕಾಶ ನೀಡಲಿದ್ದು, ಆದರೆ ಹೆದ್ದಾರಿ ತಡೆ ನಡೆಸಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅರ್ಥಪೂರ್ಣ ಚರ್ಚೆ: ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನ ದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸಂಬಂಧಿಸಿದ ಚರ್ಚೆಗಳನ್ನು ಸ್ವಾಗತಿಸುತ್ತೇವೆ. ಕೆಲವು ವಿಚಾರ ಗಳಲ್ಲಿ ನಿರ್ಧಾರಕ್ಕೆ ಬರಬೇಕೆನ್ನುವ ಉದ್ದೇಶವಿದೆ ಎಂದು ತಿಳಿಸಿದರು.

Belagavi winter session/Suvarna Vidhana Soudha in Belagavi/12-12-2021

administrator

Related Articles

Leave a Reply

Your email address will not be published. Required fields are marked *