ಹುಬ್ಬಳ್ಳಿ-ಧಾರವಾಡ ಸುದ್ದಿ
ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ   ಬೊಮ್ಮಾಯಿ-ಕಟೀಲ್ ತೀರ್ಮಾನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಬೊಮ್ಮಾಯಿ-ಕಟೀಲ್ ತೀರ್ಮಾನ

ಬೆಂಗಳೂರು : ಒಂದೂವರೆ ವರ್ಷದ ಅವಧಿ ಪೂರೈಸಿರುವ ಎಲ್ಲ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ ಪಕ್ಷದ ಇತರ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಮುಂದಾಗಿದೆ.
ಪಕ್ಷದ ಮೂಲಗಳ ಪ್ರಕಾರ 32 ಮಂದಿ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಕಾರ್ಯಕರ್ತರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಪಕ್ಷದ ಕಚೇರಿಯಲ್ಲಿ ತಡರಾತ್ರಿವರೆಗೂ ಸಭೆ ನಡೆಸಿದ್ದು ಇನ್ನುಳಿದ ಅವಧಿಗೆ ಉಳಿದವರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆನ್ನಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶೀಘ್ರವೇ ಹೊಸ ಅಧ್ಯಕ್ಷರ ನೇಮಕದ ಆದೇಶ ಹೊರಡಿಸಲಿದ್ದಾರೆ ಎನ್ನಲಾಗಿದೆ.
ನಿಗಮ ಮಂಡಳಿ ಅಧ್ಯಕ್ಷರಾಗಿರುವ ಶಾಸಕರನ್ನು ಸದ್ಯಕ್ಕೆ ಬದಲಾವಣೆ ಮಾಡದಿರಲು ತೀರ್ಮಾನಿಸಿದ್ದು, ಪಕ್ಷದ ಕಾರ್ಯಕರ್ತರಾಗಿರುವ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಲು ನಿರ್ಧರಿಸಲಾಗಿದೆ. ಅಲ್ಲದೇ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡ ಕೆಲವರ ಬದಲಾವಣೆ ನಿಶ್ಚಿತವಾಗಿದೆ ಎನ್ನಲಾಗಿದ್ದು, ಮುಂದುವರಿಯಲು ತೀವ್ರ ಒತ್ತಡ ಹಾಕಿದ್ದಾರೆನ್ನಲಾಗಿದೆ.

ಅಧಿಕಾರ ಗಿಟ್ಟಿಸಲು ಪೈಪೋಟಿ
ಹುಬ್ಬಳ್ಳಿ : ನಿಗಮ ಮಂಡಳಿ ಅಧ್ಯಕ್ಷರ ಬದಲಾಯಿಸುವ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಹಾಗೂ ಜಿಲ್ಲಾ ಅಧ್ಯಕ್ಷರಿಂದ ಹೊಸ ಪಟ್ಟಿ ತರಿಸಿಕೊಳ್ಳಲಾಗಿದೆ.ಅಲ್ಲದೇ ಇತ್ತೀಚೆಗೆ ನಡೆದ ಕೋರ್ ಕಮೀಟಿ ಸಭೆಯಲ್ಲೂ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.
ವಾಯುವ್ಯ ಸಾರಿಗೆ,ಹುಡಾ,ಬಾಲ ವಿಕಾಸ ಅಕಾಡೆಮಿ, ಎನ್ ಜಿಈಎಫ್, ಸೇರಿದಂತೆ ರಾಜ್ಯ ಮಟ್ಟದ ನಿಗಮಗಳಿಗೆ ಹಲವು ಆಕಾಂಕ್ಷಿಗಳಿದ್ದು ಈಗಾಗಲೇ ಕೆಲವರ ಹೆಸರು ಶಿಫಾರಸು ಆಗಿದೆ ಎನ್ನಲಾಗಿದೆ. ಅಲ್ಲದೇ ಬೆರಳೆಣಿಕೆಯ ಕೆಲವರು ಮುಂದುವರಿಯುವ ಸಾಧ್ಯತೆಗಳಿದ್ದು ಅನೇಕ ಹೊಸಬರಿಗೆ ಅಧಿಕಾರ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಎರಡು ಹುದ್ದೆಗಳಲ್ಲಿ ಮುಂದುವರಿದವರು ಒಂದು ಹುದ್ದೆ ಕಳೆದುಕೊಳ್ಳಲಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *