ಹುಬ್ಬಳ್ಳಿ-ಧಾರವಾಡ ಸುದ್ದಿ
ಶಿಥಿಲ ಕಟ್ಟಡಗಳ ತೆರವು ಕಾರ್ಯಾಚರಣೆ

ಶಿಥಿಲ ಕಟ್ಟಡಗಳ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಶಿಥಿಲಗೊಂಡ ಕಟ್ಟಡಗಳ ತೆರವು ಕಾರ್ಯಾಚರಣೆ ಇಂದು ನಗರದಲ್ಲಿ ನಡೆಯಿತು.
ಇಲ್ಲಿನ ಬ್ರಾಡ್ ವೇಯಲ್ಲಿರುವ ಶಹರ ಪೊಲೀಸ್ ಠಾಣೆ ಎದುರಿನ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌ನಲ್ಲಿನ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ಈಗಾಗಲೇ ಕಟ್ಟಡ ಶಿಥಿಲಗೊಂಡಿದ್ದು, ಹಲವಾರು ಬಾರಿ ನೋಟೀಸ್ ನೀಡಿದರೂ ಬಾಡಿಗೆದಾರರು ಖಾಲಿ ಮಾಡಲು ಮುಂದಾಗದ ಹಿನ್ನೆಲೆಯಲ್ಲಿ ದಿಢೀರಾಗಿ ಪಾಲಿಕೆ ಸಿಬ್ಬಂದಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು ಕಾರ್ಯಾಚರಣೆಗೆ ಕೈಗೊಂಡರು.


ಕಾರ್ಯಾಚರಣೆಗೆ ಮೊದಲು ಅಂಗಡಿದಾರರಿಗೆ ತೆರವಿಗೆ ಪಾಲಿಕೆಯಿಂದ ಅರ್ಧ ಗಂಟೆ ಅವಕಾಶ ಮಾಡಿಕೊಡಲಾಗಿತ್ತು. ಅಷ್ಟಾದರೂ ತೆರವು ಮಾಡದೇ ಇರುವ ಅಂಗಡಿಯಲ್ಲಿ ಸಾಮಾನುಗಳನ್ನು ಪಾಲಿಕೆ ಸಿಬ್ಬಂದಿ ಹಾಗೂ ಜೆಸಿಬಿ ಹೊರ ಹಾಕಿದ್ದು, ಮಧ್ಯಾಹ್ನದವರೆಗೂ ಕಾರ್ಯಾಚರಣೆ ಮುಂದುವರಿದಿದೆ.

 

administrator

Related Articles

Leave a Reply

Your email address will not be published. Required fields are marked *