ಧಾರವಾಡ: ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದ್ದು, ಬೆಳಿಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಿಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಈಗಾಗಲೇ ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಿಸಲಾಗಿದೆ. ಮತ್ತು ತನಿಖೆ ಆರಂಭಿಸಲಾಗಿದ್ದು, ಶೀಘ್ರದಲ್ಲೇ ಮರ ಕಳ್ಳರನ್ನು ಬಂಧಿಸಲಾಗುವುದು ಎಂದು ಉಪ್ಪಾರ ಅವರು ಹೇಳಿದ್ದಾರೆ.