ಧಾರವಾಡ: ಪತ್ನಿಯನ್ನು ಕೊಂದ ಪತಿರಾಯ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿಯ ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಪೇಡೆನಗರಿಯ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಚೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಚೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಪೊಲೀಸರು ಶಂಕೆವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಿಪಿಐ ರಮೇಶ ಹೂಗಾರ ಭೇಟಿ ನೀಡಿದ್ದರು. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ.