ಹುಬ್ಬಳ್ಳಿ: ಪ್ರಸಕ್ತ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಸಂಪುಟ ವಿಸ್ತರಣೆ ವಿಚಾರದಲ್ಲಿ ಈ ಬಗ್ಗೆ ವರಿಷ್ಟರು ಹಾಗೂ ಸಿಎಂ ನಿರ್ಧಾರ ಕೈಗೊಳ್ಳುತ್ತಾರೆ. ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಸಚಿವ ಸಂಪುಟ ಸೇರುವ ವಿಚಾರದ ಬಗ್ಗೆ ಪದೇ ಪದೇ ಹೇಳುವುದಿಲ್ಲ. ನನ್ನ ನಿಲುವು ಸ್ಪಷ್ಟವಿದೆ ನಾನು ಸಂಪುಟ ಸೇರಲ್ಲ, ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ನಡೆಯುವುದಿಲ್ಲ ಎಂದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಮತ್ತು ಡಿಕೆಶಿ ಬಣ ಬೇರೇ ಬೇರೆ ಇದೆ.
ಈಗಾಗಲೇ ಕಾಂಗ್ರೆಸ್ ನಾಯಕರಲ್ಲಿ ಗುಂಪುಗಾರಿಕೆ ಆರಂಭವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತೆ ಅಂತಾ ಮೋದಿಯವರು ಹೇಳುತ್ತಿದ್ದರು. ಈಗ ಅದೇ ಮಾತಿನಂತೆ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತಿದೆ ಎಂದರು.
ಇನ್ನೂ ಬಜೆಟ್ ಬಗ್ಗೆ ಮಾತನಾಡಿ ರಾಜ್ಯದಲ್ಲಿ ಹಿಂದಿನ ಎಲ್ಲಾ ಸರ್ಕಾರ ಗಳು ಬಜೆಟ್ ಹಣವನ್ನ ಬಾಕಿ ಉಳಿಸಿಕೊಂಡಿವೆ. ಸಿದ್ಧರಾಮಯ್ಯ ಅವರ ಇಂದಿರಾ ಕ್ಯಾಂಟೀನ್ ಹಣ ಸಾಕಷ್ಟು ಬಾಕಿ ಉಳಿದಿದೆ,ಅದರ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲಿ ಎಂದು ಆಕ್ರೋಶ ಗೊಂಡರು.
ಪ್ರತಿ ಬಜೆಟ್‌ನಲ್ಲಿ ಮಹದಾಯಿಗಾಗಿ ಕೇವಲ ಹಣ ಮೀಸಲು ಇಡಲಾಗುತ್ತಿದ್ದು, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿಲ್ಲ, ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ನೀರು ಕೊಡಲ್ಲ ಅಂತಾ ಹೇಳುತ್ತಾರೆ,ಆದರೆ ರಾಜ್ಯದಲ್ಲಿ ಮಹದಾಯಿ ನೀರಿಗಾಗಿ ಪಾದಯಾತ್ರೆ ಮಾಡುತ್ತೇವೆ ಎನ್ನುತ್ತಾರೆ. ಮಹದಾಯಿ ವಿಚಾರದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಇವೆ,ಆ ಸಮಸ್ಯೆಗಳು ಬಗೆಹರಿದ ನಂತರ ಮಹದಾಯಿ ಕಾಮಗಾರಿ ಆರಂಭವಾಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.