ಹುಬ್ಬಳ್ಳಿ-ಧಾರವಾಡ ಸುದ್ದಿ

ನುಗ್ಗಿಕೇರಿ ಹನುಮಾನ ದೇವಸ್ಥಾನದಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ

ಧಾರವಾಡ: ಹಿಂದು ದೇವಸ್ಥಾನಗಳ ಆವರಣದಲ್ಲಿ ಅನ್ಯ ಧರ್ಮಿಯರ ವ್ಯಾಪಾರ-ವಹಿವಾಟನ್ನು ತಡೆಯುವಂತೆ ಆಗ್ರಹಿಸಿ ಹಿಂದು ಸಂಘಟನೆಗಳು ನಡೆಸುತ್ತಿರುವ ಹೋರಾಟ ಇದೀಗ ನಗರದಲ್ಲಿ ಆರಂಭವಾಗಿದೆ.


ಸಮೀಪದ ನುಗ್ಗಿಕೇರಿ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ಯ ಧರ್ಮಿಯರ ವ್ಯಾಪಾರವನ್ನು ವಿರೋಧಿಸಿ ಶ್ರೀ ರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂಯೇತರಿಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಇಲ್ಲ. ಸಂವಿಧಾನ ವಿರೋಧಿಸುವ ಹಾಗೂ ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪಾಲಿಸದ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳಲ್ಲಿ ಅವಕಾಶ ನೀಡಬಾರದು. ಈ ಹಿನ್ನೆಲೆ ಯಲ್ಲಿ ಕೂಡಲೇ ಸಂವಿಧಾನ ವಿರೋಧಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ನುಗ್ಗಿಕೇರಿ ಹನುಮಂತ ದೇವಸ್ಥಾನದ ಆಡಳಿತ ಮಂಡಳಿ ತೆರವು ಮಾಡಬೇಕು. ಇಲ್ಲದಿದ್ದರೆ ಮುಂಬರುವದ ದಿನಗಳಲ್ಲಿ ನಾವೇ ತೆರವು ಮಾಡಬೇಕಾಗುತ್ತದೆ ಎಂದು ದೇವಸ್ಥಾನ ಆಡಳಿತ ಮಂಡಳಿಗೆ ಸಲ್ಲಿಸಿದ ಮನವಿಯಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರು ಎಚ್ಚರಿಸಿದರು.
ಶ್ರೀ ರಾಮ ಸೇನೆಯ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಧಾರವಾಡ ತಾಲೂಕು ಅಧ್ಯಕ್ಷ ಮೈಲಾರ ಗುಂಡಪ್ಪನವರ, ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಾಟಕರ, ಸಿದ್ದು ಮಡಿವಾಳರ, ಚಿದು ಕಲಾಲ, ಪಾಂಡು ಯಮೋಜಿ, ಪರಶುರಾಮ, ನಾಗರಾಜ, ಬಸವರಾಜ ದುರ್ಗದ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿದ್ದರು.

administrator

Related Articles

Leave a Reply

Your email address will not be published. Required fields are marked *