ಹುಬ್ಬಳ್ಳಿ-ಧಾರವಾಡ ಸುದ್ದಿ
ಆಸ್ತಿಗಾಗಿ ಮಗನಿಂದಲೇ ತಾಯಿಯ ಕೊಲೆ

ಆಸ್ತಿಗಾಗಿ ಮಗನಿಂದಲೇ ತಾಯಿಯ ಕೊಲೆ

ಅಣ್ಣಿಗೇರಿ: ತಾಲ್ಲೂಕಿನ ಬೆನ್ನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಆಸ್ತಿಗಾಗಿ ಮಗನೇ ತಾಯಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಶಾಂತವ್ವ ಕಲ್ಲಪ್ಪ ಅಣ್ಣಿಗೇರಿ(65) ಎಂಬಾಕೆಯೇ ಮೃತ ದುರ್ದೈವಿಯಾಗಿದ್ದಾಳೆ.
ಆರೋಪಿ ಮಗ ಬಸವರಾಜ ಕಲ್ಲಪ್ಪ ಅಣ್ಣಿಗೇರಿ(45) ಆಸ್ತಿ ಕೊಡು ಅಂತ ರಾತ್ರಿ ಬಡಿಗೆಯಿಂದ ತಾಯಿಯನ್ನು ಬಡಿದಿದ್ದಾನೆ ಇದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಗಂಡ ಕಲ್ಲಪ್ಪ ದೂರು ದಾಖಲಿಸಿದ್ದಾನೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಎಲ್ .ಕೆ.ಜೂಲಕಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *