ಹುಬ್ಬಳ್ಳಿ-ಧಾರವಾಡ ಸುದ್ದಿ
ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಅಂದರ್

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಅಂದರ್

ಧಾರವಾಡ: ಅಪ್ರಾಪ್ತೆಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ಇಲ್ಲಿನ ಕಮಲಾಪೂರ ನಿವಾಸಿ ಚನ್ಮಪ್ಪ ಮಹಾದೇವಪ್ಪ ಸಪೂರಿ ಎಂಬುವನೇ ಬಂಧಿತ ಆರೋಪಿ. ಈತನು ಕಳೆದ ದಿ.13 ರಂದು ಮಾಳಾಪೂರ ಬಡಾವಣೆಯ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಸಿನಿಮಾ ತೋರಿಸುವುದಾಗಿ ಪುಸಲಾಯಿಸಿ ತನ್ನ ಬೈಕ್ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಅಲ್ಲದೇ ಯಾರ ಮುಂದೆಯೂ ಬಾಯಿ ಬಿಟ್ಟರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದನು.
ಮರುದಿನ ಬಾಲಕಿ ನರಳಾಡಿದಾಗ ಮನೆಯವರಿಗೆ ವಿಷಯ ಗೊತ್ತಾಗಿದ್ದು, ಉಪನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *