ಧಾರವಾಡ : ಬೀದಿ ಬದಿಯ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಅಂಗಡಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಹಾನಗರ ಪಾಲಿಕೆ ಬಡವರ ಉದ್ಯೋಗ ಕಸಿದುಕೊಳ್ಳುವ ಕುತಂತ್ರ ಮಾಡುತ್ತಿದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಸುಭಾಷ್ ರಸ್ತೆ, ಅಕ್ಕಿಪೇಟೆ, ಕಾಯಿಪಲ್ಲೆ ಮಾರುಕಟ್ಟೆ ಸೇರಿದಂತೆ ವಿವಿಧ ಕಡೆಗಳಲ್ಲಿನ ಏಕಾಏಕಿ ಡಬ್ಬಾ ಅಂಗಡಿ ತೆರವು ಮಾಡುತ್ತಿರುವುದು ಸರಿಯಲ್ಲ. ಬಡ ಜನರು ಸುಮಾರು 40-50 ವರ್ಷಗಳಿಂದ ವ್ಯಾಪಾರ ವಹಿವಾಟು ಮಾಡಿಕೊಂಡು ಬಂದಿರುತ್ತಾರೆ. ಆದರೆ, ಈಗ ಕುಟುಂಬಗಳು ಬೀದಿಗೆ ಬರುವ ಸ್ಥಿತಿಯನ್ನು ಮಹಾನಗರ ಪಾಲಿಕೆ ತರುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಸರಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡಿದ ನಂತರ ಅಂಗಡಿ ತೆರವು ಮಾಡಬೇಕು. ಎಲ್ಲ ಅಲ್ಲದೇ ಎಲ್ಲ
ವ್ಯಾಪಾರಸ್ಥರಿಗೂ ಕಾಲಾವಕಾಶ ನೀಡಿ ಅವರ ಜೀವನ ನಡೆಸಲು ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.