ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಜಾಬಿನ್ ಕಾಲೇಜ್ ಪ್ರಾಧ್ಯಾಪಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಪ್ರವೀಣ್ ಕುಮಾರ್ ಯು.ಆರ್(35) ಎಂಬಾತರೇ ಜೆ.ಜಿ.ಕಾಮರ್ಸ್ ಕಾಲೇಜಿನ ಹಿಂಭಾಗದ ಕ್ವಾರ್ಟಸ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನ. 13 ರ ರಾತ್ರಿ ಬೆಳಗಿನ ಜಾವ 3 ಗಂಟೆಯ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.