ಹುಬ್ಬಳ್ಳಿ-ಧಾರವಾಡ ಸುದ್ದಿ
ನಟೋರಿಯಸ್ ಚಡ್ಡಿಗ್ಯಾಂಗ್‌ನ ಕುಖ್ಯಾತ ಪಾಲಾ ಮೇಲೆ ಫೈರಿಂಗ್

ನಟೋರಿಯಸ್ ಚಡ್ಡಿಗ್ಯಾಂಗ್‌ನ ಕುಖ್ಯಾತ ಪಾಲಾ ಮೇಲೆ ಫೈರಿಂಗ್

ಧಾರವಾಡ ವಿದ್ಯಾಗಿರಿ ಪೊಲೀಸರ ಕಾರ್ಯಾಚರಣೆ

ಸುಳ್ಳ ರೋಡ ಕೊಲೆ: ಆರೋಪಿ ಗೌಸ್ ಮೊಹಮ್ಮದ್ ನದಾಫ್ ಅಂದರ್

ಧಾರವಾಡ: ಮನೆ ಕಳವು ಪ್ರಕರಣದ ಆರೋಪಿ, ಆಂಧ್ರದ ಕರ್ನೂಲ್ ಮೂಲದ ನಟೋರಿಯಸ್ ಪಾಲಾ ವೆಂಕಟೇಶ್ವರರಾವ್ ಎರಡೂ ಕಾಲಿಗೆ ವಿದ್ಯಾಗಿರಿ ಪೋಲೀಸರು ಇಂದು ಬೆಳಗ್ಗೆ ಗುಂಡು ಹೊಡೆದಿದ್ದಾರೆ.
ಧಾರವಾಡದ ನವಲೂರಿನ ಮನೆಯೊಂದಕ್ಕೆ ಕನ್ನ ಹಾಕಿದ್ದ ಭೂಪ, ಪಾಲಾನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಆರೋಪಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಪಿಎಸ್‌ಐ ಸೇರಿ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಕಳೆದ ೬ ತಿಂಗಳ ಹಿಂದೆ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್‌ಡಿಎಂ ಆಸ್ಪತ್ರೆಯ ಹಿಂಭಾಗದ ಅಶೋಕ ಕದಂ ಎಂಬುವರ ಮನೆ ಬಾಗಿಲಿಗೆ ಕಲ್ಲು ಒಗೆದು ಬಾಗಿಲು ಮುರಿದು ರಾತ್ರಿ ಸಮಯದಲ್ಲಿ ಮನೆಯಲ್ಲಿದ್ದ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆರೋಪಿಗಳು ಆಂಧ್ರಪ್ರದೇಶದ ಕರ್ನುಲ್’ನ ನಟೋರಿಯಸ್ ಚಡ್ಡಿ ಗ್ಯಾಂಗ್ ಕೈವಾಡ ಗೊತ್ತಾಗಿ ತನಿಖೆ ತೀವ್ರಗೊಳಿಸಿದ್ದರು.


೮೦ ಕ್ಕೂ ಹೆಚ್ಚು ಕಳ್ಳತನದಲ್ಲಿ ಭಾಗಿಯಾಗಿದ್ದ ನಟೋರಿಯಸ್ ಪಾಲಾ ವೆಂಕಟೇಶ್ವರ ರಾವ್ ಮೂಲತಃ ಆಂದ್ರಪ್ರದೇಶದವ. ಸುಮಾರು ಐದು ರಾಜ್ಯಗಳ ಪೊಲೀಸರ ಬೇಕಾಗಿದ್ದ ಪಾಲಾ ಈಗ ಪೊಲೀಸರ ವಶದಲ್ಲಿ ಆಸ್ಪತ್ರೆಯಲ್ಲಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು. ಆ ವೇಳೆ ಆತ್ಮರಕ್ಷಣೆಗಾಗಿ ಪಿ.ಎಸ್.ಐ ಪ್ರಮೋದ ದರೊಡೆಕೋರ ಪಾಲಾ ವೆಂಕಟೇಶ್ವರ ರಾವ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಘಟನೆಯಲ್ಲಿ ಪಿ.ಎಸ್.ಐ ಪ್ರಮೋದ ಸೇರಿದಂತೆ ಓರ್ವ ಪೊಲೀಸ್ ಕಾನ್ಸಟೆಬಲ್‌ಗೆ ಗಾಯವಾಗಿದ್ದು, ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಅಲ್ಲದೇ ಫೈರಿಂಗ್ ಮಾಡಿದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ನಟೋರಿಯಸ್ ದರೋಡೆ ಮಾಡುವ ಚಡ್ಡಿ ಗ್ಯಾಂಗ್ ಕರ್ನಾಟಕದ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದರೋಡೆ ಮಾಡಿದೆ ಎನ್ನಲಾಗುತ್ತಿದ್ದು ಖಾಕಿ ವಿಚಾರಣೆಯಲ್ಲಿ ಮತ್ತಷ್ಟು ಪ್ರಕರಣಗಳು ಹೊರಬರುವ ಸಾಧ್ಯತೆಗಳಿವೆ.

ಸುಳ್ಳ ರೋಡ ಕೊಲೆ: ಆರೋಪಿ ಗೌಸ್ ಮೊಹಮ್ಮದ್ ನದಾಫ್ ಅಂದರ್

ಹುಬ್ಬಳ್ಳಿ : ಕಳೆದ ದಿ. 22ರಂದು ಹುಬ್ಬಳ್ಳಿಯ ಸುಳ್ಳ ರೋಡ್ ಇಂದ್ರಪ್ರಸ್ಥ ಲೇಔಟ್ ನಲ್ಲಿ ಸೋನಿಯಾಗಾಂಧಿ ನಗರದ ನಿವಾಸಿಯಾದ ಕುಮಾರ್ ಬೆಟಗೇರಿ (57) ಎಂಬಾತನನ್ನು ಕೊಲೆ ಮಾಡಿ, ಪರಾರಿಯಾದ ಆರೋಪಿ ಬಂಧಿಸುವಲ್ಲಿ ಕೇಶ್ವಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.


ಈ ಪ್ರಕರಣ ಪತ್ತೆ ಹಚ್ಚಲು ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ್ ನಾಯಕ್ ರವರ ನೇತೃತ್ವದಲ್ಲಿ ಕೇಶ್ವಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ ಎಸ್ ಹಟ್ಟಿ ಮತ್ತವರ ಠಾಣೆಯ ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ತಂಡವು ಆರೋಪಿಯಾದ ದೇವಾಂಗಪೇಟೆ ನಿವಾಸಿಯಾದ ಗೌಸ್ ಮೊಹಮ್ಮದ್ ನದಾಫ್ (40) ಎಂಬಾತನನ್ನು ಬಂಧಿಸಿ, ಕೃತಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಮೃತನಿಂದ ಸುಲಿಗೆ ಮಾಡಿದ ನಗದು ಹಣವನ್ನು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಆರೋಪಿಯ ಕುರಿತು ಯಾವುದೇ ಸುಳಿವು ಇರದ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪೋಲಿಸ್ ಆಯುಕ್ತ ಶಶಿಕುಮಾರ ಶ್ಲ್ಯಾಘಿಸಿದ್ದಾರೆ.ಬಿ

 

administrator

Related Articles

Leave a Reply

Your email address will not be published. Required fields are marked *