ಧಾರವಾಡ: ಅಪ್ರಾಪ್ತೆ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ತಾಲೂಕಿನ ವೆಂಕಟಾಪೂರ ಗ್ರಾಮದಲ್ಲಿ ನಡೆದಿದೆ.
ಕಳೆದ ದಿ.19 ರಂದು ವೆಂಕಟಾಪೂರದ ಯುವಕ ಅದೇ ಗ್ರಾಮದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊ ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಘಟನೆಯಿಂದ ನೊಂದ ಬಾಲಕಿ ಮನೆಯವರ ಬಳಿ ಹೇಳಿದಾಗ ವಿಷಯ ಗೊತ್ತಾಗಿದೆ. ಈ ಕುರಿತು ಬಾಲಕಿನ ಕುಟುಂಬದವರು ಗರಗ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿನ್ನೆ ಸಂಜೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.