ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಸದಸ್ಯರೇ ಖಾಲಿ ಕೊಡ ಹಿಡಿದುಕೊಂಡು ಬಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಉಪ್ಪಿನ ಬೆಟಗೇರಿ ಗ್ರಾಮ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದAತೆ ಕೊನೆಯ ಗ್ರಾಮವಾಗಿದೆ. ಈ ಗ್ರಾಮಕ್ಕೆ ಅಮ್ಮಿನಭಾವಿ ಯಿಂದ ತಿಮ್ಮಾಪುರ, ಕರಡಿಗುಡ್ಡ, ಪುಡಕಲಕಟ್ಟಿ ಗ್ರಾಮದ ಮೂಲಕ ಮಲಪ್ರಭಾ ನೀರು ಬರುತ್ತದೆ. ಒಂದೇ ಪೈಪ್ಲೈನ್ ಮೂಲಕ ನೀರು ಸರಬರಾಜು ಆಗುತ್ತಿದೆ. ಇದರಿಂದ ಪ್ರತಿ ೧೫ ದಿನಕ್ಕೊಮ್ಮೆ ಗ್ರಾಮಕ್ಕೆ ಕುಡಿಯುವ ನೀರು ಬರುತ್ತಿವೆ. ನೀರಿನ ಟ್ಯಾಂಕ್ನಲ್ಲಿ ಸಂಗ್ರಹಿಸಿಟ್ಟ ನೀರಿನಲ್ಲಿ ಹುಳುಗಳು ಆಗುತ್ತಿದ್ದು, ಗ್ರಾಮಸ್ಥರಲ್ಲಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದೇ ವಿಷಯಕ್ಕೆ ಸಂಬAಧಿಸಿದAತೆ ತಾಲೂಕು ಪಂಚಾಯ್ತಿ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿತ್ತು. ಅವರು ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಪ್ರತಿದಿನ ೮ ರಿಂದ ೯ ಲಕ್ಷ ಲೀಟರ್ ನೀರು ಪೂರೈಸಲಾಗುವುದು ಎಂದು ಹೇಳಿ ಈಗ ಮಾತಿಗೆ ತಪ್ಪಿದ್ದಾರೆ. ಆದ್ದರಿಂದ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಪ್ರತ್ಯೇಕ ಪೈಪ್ಲೈನ್ ಅಳವಡಿಸಿಕೊಟ್ಟು ನೀರಿನ ಸಮಸ್ಯೆ ಬಗೆಹರಿಸಬೇಕು ಇಲ್ಲದೇ ಹೋದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಗ್ರಾಮ ಪಂಚಾಯ್ತಿ ಸದಸ್ಯರು ಎಚ್ಚರಿಸಿದರು.