ಹುಬ್ಬಳ್ಳಿ-ಧಾರವಾಡ ಸುದ್ದಿ
ಶನಿವಾರ, ರವಿವಾರ ವಾರಾಂತ್ಯ ಕರ್ಫ್ಯೂ; ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೨ಗಂಟೆವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ

ಶನಿವಾರ, ರವಿವಾರ ವಾರಾಂತ್ಯ ಕರ್ಫ್ಯೂ; ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೨ಗಂಟೆವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ

ಧಾರವಾಡ: ಇಂದು ಜೂನ್ ೨೫ ಶುಕ್ರವಾರ ಸಂಜೆ ೭ ಗಂಟೆಯಿಂದ ಜೂನ್ ೨೮ ಸೋಮವಾರ ಬೆಳಿಗ್ಗೆ ೫ ಗಂಟೆವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜೂನ್ ೨೦ ರಂದು ಹೊರಡಿಸಿದ ಆದೇಶದ ಅನುಬಂಧ (೨)ರಲ್ಲಿ ತಿಳಿಸಿರು ವಂತೆ ನಾಳೆ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨ಗಂಟೆವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸಾಹಾರ, ಪ್ರಾಣಿಗಳಿಗೆ ಆಹಾರ ಮತ್ತಿತರ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ. ಈ ಅವಧಿಯಲ್ಲಿ ಬೀದಿ ಬದಿ ವ್ಯಾಪಾರ ಚಟುವಟಿಕೆ ಗಳು ನಡೆಯಲಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ. ಹೋಟೆಲ್‌ಗಳು ಈ ಅವಧಿಯಲ್ಲಿ ಕೇವಲ ಪಾರ್ಸೆಲ್ ಸೇವೆ ನೀಡಬಹುದಾಗಿದೆ. ಹೋಂ ಡೆಲೆವರಿ ವಹಿವಾಟುಗಳಿಗೆ ಅವಕಾಶವಿದೆ. ವ್ಯಾಪಾರಿಗಳು ಕೋವಿಡ್-೧೯ ರ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
ತುರ್ತು ಸೇವೆ ನೀಡುವ ಚಟುವಟಿಕೆಗಳು ಹಾಗೂ ಕೈಗಾರಿಕೆ ಸಂಸ್ಥೆಗಳ ಕಾರ್ಯಗಳಿಗೆ ಅವಕಾಶವಿರುತ್ತದೆ. ಟೆಲಿಕಾಂ ಮತ್ತು ಅಂತರ್ಜಾಲ ಸೇವೆ ನೀಡುವ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಮಾತ್ರ ಸಂಚರಿಸಬಹುದು. ಉಳಿದ ವರು ಮನೆಯಿಂದ ಕೆಲಸ ನಿರ್ವಹಿಸಬೇಕು. ರೋಗಿಗಳ ಆರೈಕೆದಾರರು, ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ಅಗತ್ಯ ದಾಖಲೆಗಳೊಂದಿಗೆ ಉದ್ದೇಶಿತ ಕಾರ್ಯಕ್ಕೆ ತೆರಳಬಹುದು.
ಬಸ್, ರೈಲು ಹಾಗೂ ವಿಮಾನಗಳ ಸಂಚಾರ ಇರಲಿದೆ. ಕಡಿಮೆ ಸಂಖ್ಯೆ ಯಲ್ಲಿ ಬಸ್‌ಗಳು ರಸ್ತೆಗಿಳಿಯಲಿವೆ. ಮಧ್ಯಾಹ್ನ ೨ ಗಂಟೆಯ ನಂತರ ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಈಗಾಗಲೇ ಅನುಮತಿ ಪಡೆದಿರುವ ಮದುವೆ ಸಮಾರಂಭಗಳನ್ನು ೪೦ ಕ್ಕಿಂತ ಹೆಚ್ಚು ಜನರು ಸೇರದೆ ಆಯೋಜಿಸಬಹುದು. ಅಂತ್ಯಕ್ರಿಯೆಗಳಲ್ಲಿ ಗರಿಷ್ಠ ೫ ಜನ ಮಾತ್ರ ಭಾಗವಹಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

administrator

Related Articles

Leave a Reply

Your email address will not be published. Required fields are marked *