ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿಯಲ್ಲಿ ಸ್ಟಾರ್ಟ್ ಅಪ್‌ಗಳ ಪ್ರಾದೇಶಿಕ ಕಚೇರಿ; ಆರ್ ಆಂಡ್ ಡಿ ಕಾರ್ಯಪಡೆಗೆ ಡಾ.ಶೆಟ್ಟರ್ ನೇತೃತ್ವ

ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆಂಡ್ ಡಿ ಕೇಂದ್ರಗಳಿವೆ.ಅವುಗಳಿಗೆ ಹೆಚ್ಚು ಮಹತ್ವ ನೀಡಿ,ಕೈಗಾರಿಕೆ,ಕೃಷಿ,ಆಹಾರ ರಂಗದಲ್ಲಿ ಆರ್ ಆಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಇಲ್ಲಿನ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಲ್‌ಇ ಟೆಕ್ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸ ಆರ್ ಆಂಡ್ ಡಿ ನೀತಿ ರಚನೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಕೆಎಲ್ ತಾಂತ್ರಿಕ ವಿವಿ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ.ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‌ಇ ಟೆಕ್‌ಪಾರ್ಕಿನ ಅಭಿವೃದ್ಧಿಗೆ ಅಗತ್ಯವಾಗಿರುವ ಇನ್ನೂ ೨ ಕೋಟಿ ರೂ.ಗಳನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಕ್ರೋಢೀಕರಿಸಿ ನೀಡಲಾಗುವುದು. ಸ್ಟಾರ್ಟ್ ಅಪ್‌ಗಳ ಉತ್ತೇಜನಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿಗಳನ್ನು ಪ್ರಾರಂಭಿಸಲಾಗುವುದು ಎಂದರು.

ಬೃಹತ್, ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಮಾತನಾಡಿ, ಕೆಎಲ್‌ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಿದೆ ಎಂದರಲ್ಲದೇ.ಅಕ್ಟೋಬರ್ ೧೫ ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ.ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮಾತನಾಡಿದರು. ಕೈಮಗ್ಗ, ಜವಳಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ, ಕೆಎಲ್‌ಇ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ, ಮಹಾಂತೇಶ ಕವಟಗಿಮಠ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಕೆಎಲ್‌ಇ ತಾಂತ್ರಿಕ ವಿವಿ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಸ್ವಾಗತಿಸಿದರು.

ನೆನಪಿನ ಬುತ್ತಿ ಬಿಚ್ಚಿದರು

ತಮಗೆ ವಿದ್ಯೆ ನೀಡಿದ ಸರಸ್ವತಿ ದೇಗುಲದ ಬಗ್ಗೆ ಮನದುಂಬಿ ಮಾತನಾಡಿದ ಬೊಮ್ಮಾಯಿ ಅವರು, ಕಲಿಸಿದ ಪ್ರಾಧ್ಯಾಪಕರು,ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು,ಪುಸ್ತಕ ಪಡೆಯದ ಗ್ರಂಥಾಲಯಗಳು, ಹಾಸ್ಟೇಲು, ಕ್ಯಾಂಪಸ್, ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು.

administrator

Related Articles

Leave a Reply

Your email address will not be published. Required fields are marked *