ಹುಬ್ಬಳ್ಳಿ: ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿಧನರಾದ ಹಿನ್ನೆಲೆಯಲ್ಲಿ ಇಂದು ಗೋಕುಲ ರಸ್ತೆಯ ಶಕ್ತಿನಗರದ ಅವರ ನಿವಾಸಕ್ಕೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆಳೆಯನ ಅಗಲಿಕೆ ನೆನೆದು ಅಕ್ಷರಶಃ ಕಣ್ಣೀರಾದರು.
ಹೃದಯಾಘಾತದಿಂದ ನಿನ್ನೆ ಇಹಲೋಕ ತ್ಯಜಿಸಿದ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಉಸ್ತುವಾರ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರೊಂದಿಗೆ ನಗರಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಪಾರ್ಥಿವ ಶರೀರಕ್ಕೆ ನಮಿಸಿದರರಲ್ಲದೇ ಪೂಜೆಯಲ್ಲಿ ಪಾಲ್ಗೊಂಡರು.
ಬಳಿಕ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದರು. ಇದೇ ವೇಳೆ ಅಲ್ಲಿದ್ದ ಅನೇಕ ಹಳೆಯ ಸ್ನೇಹಿತರೊಂದಿಗೆ ಕುಳಿತು ಹಿಂದಿನ ನೆನಪುಗಳನ್ನು ಮೆಲಕು ಹಾಕಿದರು.