ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿಯಲ್ಲಿ 25ಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್

ಹುಬ್ಬಳ್ಳಿ: ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ತೀವ್ರತೆ ನೀಡುವ ಉದ್ದೇಶದಿಂದ ದಿ. 25 ರಂದು ಗೋಕುಲ ಗಾರ್ಡನ್‌ನಲ್ಲಿ ’ಪ್ರತಿಜ್ಞಾ ಪಂಚಾಯತ್’ ಅಭಿಯಾನ ಆಯೋಜಿಸಲಾಗಿದೆ ಎಂದು ಪಂಚಮಸಾಲಿ ಹೋರಾಟದ ಸ್ವಾಗತ ಸಮಿತಿ ಅಧ್ಯಕ್ಷ ನಿಂಗಣ್ಣ ಕರಿಕಟ್ಟಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಕ್ಟೋಬರ್ ೧ರೊಳಗಾಗಿ ಪಂಚಮಸಾಲಿ ಸಮಾಜವನ್ನು 2ಎಗೆ ಸೇರ್ಪಡೆಗೆ ಅವಶ್ಯಕ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

PANCHAMASALI

ಸರ್ಕಾರ ನಮ್ಮ ಬೇಡಿಕೆಯನ್ನು ಆದ್ಯತೆ ಮೇರೆಗೆ ಪರಿಗಣಿಸದೇ ಇದ್ದಲ್ಲಿ ಬೆಂಗಳೂರಿನ ಫ್ರೀಡಮ್ ಪಾರ್ಕನಲ್ಲಿ ಮತ್ತೇ ಉಗ್ರ ಹೋರಾಟ ನಡೆಸ ಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ಸಮಾಜದ ಯುವ ಘಟಕದ ಅಧ್ಯಕ್ಷ ವಿರೇಶ ಉಂಡಿ, ಮುಖಂಡ ನಾಗರಾಜ ಗೌರಿ ಇವರು ಮಾತನಾಡಿ, ಪಂಚಮಸಾಲಿ ಸಮಾಜವನ್ನು ೨ಎ ಗೆ ಸೇರ್ಪಡೆ ಮಾಡುವಂತೆ ಸಮಾಜ ಬಾಂಧವರು ಸಾಕಷ್ಟು ಹೋರಾಟ ಮಾಡುತ್ತ ಬಂದಿದ್ದರೂ ಈವರೆಗಿನ ಸರ್ಕಾರಗಳು ಬೇಡಿಕೆ ಈಡೇರಿಸಲು ಮುಂದಾಗಿಲ್ಲ, ೨೦೧೨ರಿಂದ ಈ ಹೋರಾಟ ಆರಂಭಗೊಂಡಿರುವ ಈ ಹೋರಾಟ, ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಸಮಾಜ ಬಾಂಧವರೆಲ್ಲರೂ ಸೇರಿ ಅಧಿವೇಶನಕ್ಕೆ ಮುತ್ತಿಗೆ ಹಾಕಿದ್ದರು. ನಂತರ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಗಳೂರವರೆಗೆ ಪಾದಯಾತ್ರೆ ನಡೆಸಿ ಫ್ರೀಡಮ್ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದರು.ಈ ಸಂದರ್ಭದಲ್ಲಿ ಸರ್ಕಾರದ ಮಂತ್ರಿಗಳು ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರ್ಪಡೆಗೆ ಸೂಕ್ತ ಕ್ರಮಕೈಗೊಳ್ಳು ವುದಾಗಿ ನೀಡಿದ್ದ ಭರವಸೆ ಹಾಗೇ ಉಳಿದಿದೆ. ಅಕ್ಟೋಬರ್ 1 ರೊಳಗಾಗಿ ಸರ್ಕಾರ ಈ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಿಶ್ಚಿತ ಎಂದರು.
ಪ್ರತಿಜ್ಞಾ ಪಂಚಾಯತ್‌ದಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಮಾಜದ ಜಿಲ್ಲಾ ಘಟಕ, ತಾಲೂಕು ಘಟಕ ಹಾಗೂ ಗ್ರಾಮ ಘಟಕದ ಪ್ರತಿನಿಧಿಗಳು ಸೇರಿದಂತೆ ಸಹಸ್ರಾರು ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

 

administrator

Related Articles

Leave a Reply

Your email address will not be published. Required fields are marked *