ಹುಬ್ಬಳ್ಳಿ-ಧಾರವಾಡ ಸುದ್ದಿ
ಹು-ಧಾ ಪಾಲಿಕೆ ಚುನಾವಣೆ ಪಕ್ಕಾ; ಎಲೆಕ್ಷನ್ ನಡೆಸಲು ಸರ್ಕಾರ ಸಿದ್ಧ; ೬ ತಿಂಗಳು ಮುಂದಕ್ಕೆ ವದಂತಿಗಳಿಗೆ ತೆರೆ

ಹು-ಧಾ ಪಾಲಿಕೆ ಚುನಾವಣೆ ಪಕ್ಕಾ; ಎಲೆಕ್ಷನ್ ನಡೆಸಲು ಸರ್ಕಾರ ಸಿದ್ಧ; ೬ ತಿಂಗಳು ಮುಂದಕ್ಕೆ ವದಂತಿಗಳಿಗೆ ತೆರೆ

ಹುಬ್ಬಳ್ಳಿಯಲ್ಲೇ ಸಚಿವ ಬೈರತಿ ಹೇಳಿಕೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದ್ದು, ಆದಷ್ಟು ಶೀಘ್ರ ಎರಡು ತಿಂಗಳೊಳಗೆ ನಿಶ್ಚಿತ ಎಂದು ಸ್ವತಃ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಚುನಾವಣೆ ದಿನಗಣನೆಗೆ ಮತ್ತಷ್ಟು ಕಾವೇರಿದಂತಾಗಿದೆ.


ಸ್ಮಾರ್ಟ ಸಿಟಿ ಕಾಮಗಾರಿಗೆ ಚಾಲನೆ ನೀಡಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ನಿಂದ ಮಹಾನಗರ ಪಾಲಿಕೆ ಚುನಾವಣೆ ವಿಳಂಬವಾಗಿದೆ. ಚುನಾವಣೆಗೆ ಸಂಬAಧಿಸಿ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನಾದರೂ ಎರಡು ತಿಂಗಳಲ್ಲಿ ನಡೆಸಲುದ್ದೇಶಿಸಿದ್ದೇವೆ ಎನ್ನುವ ಮೂಲಕ ಅಗಸ್ಟ ಅಂತ್ಯದೊಳಗೆ ಚುನಾವಣೆ ನಿಶ್ಚಿತ ಎಂಬ ಸುಳಿವು ನೀಡಿದ್ದಾರೆ.
ಈಗಾಗಲೇ ಹು-ಧಾ ಮಹಾನಗರ ಪಾಲಿಕೆ ವಾರ್ಡ್ ಮೀಸಲಾತಿ ಪ್ರಕಟ ಮಾಡಲಾಗಿದೆ. ಮತದಾರರ ಪಟ್ಟಿಯೂ ಪ್ರಕಟಗೊಂಡಿದೆ. ಕೋವಿಡ್’ನಿಂದ ಮಹಾನಗರ ಪಾಲಿಕೆ ಚುನಾವಣೆ ವಿಳಂಬವಾಗಿದೆ. ನಾವು ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ ಎನ್ನುವ ಮೂಲಕ ಇನ್ನೂ ೬ ತಿಂಗಳು ಮುಂದಕ್ಕೆ ಹೋಗುತ್ತದೆ ಎಂಬ ಗಾಳಿ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಯಾವುದೇ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಸಹ ಸ್ಪಷ್ಟಪಡಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ೩೫ ಕೋಟಿ ವೆಚ್ಚದ ಹಳೇ ಬಸ್ ಬಸ್ ನಿಲ್ದಾಣ ಪುನರ್ ನಿರ್ಮಾಣ ಕಾಮಗಾರಿ ಗೆ ಸಚಿವ ಬೈರತಿ ಬಸವರಾಜ ಚಾಲನೆ ನೀಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಇದ್ದರು.

administrator

Related Articles

Leave a Reply

Your email address will not be published. Required fields are marked *