40 ಬಿಜೆಪಿ ಕಾರ್ಯಕರ್ತರು ಖಾಕಿ ವಶಕ್ಕೆ
ಹುಬ್ಬಳ್ಳಿ: ರಾಜ್ಯದಲ್ಲಿ ಸಾವರ್ಕರ್ ಕಿಚ್ಚು ಹೆಚ್ಚಾಗಿದ್ದು. ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಬೆಂಕಿ ಹಚ್ಚಿ ದಹನ ಮಾಡಿದ ಹಿನ್ನೆಲೆಯಲ್ಲಿ ಇಂದು ಕಾರವಾರ ರಸ್ತೆ ಕಾಂಗ್ರೆಸ್ ಕಚೇರಿಗೆ ಅಲ್ಲದೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಎಂ.ಬಿ.ಪಾಟೀಲ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕಾರವಾರ ರಸ್ತೆಯ ಇಎಸ್‌ಐ ಆಸ್ಪತ್ರೆಯಿಂದ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣೆಗೆ ಮಾಡುವ ಮೂಲಕ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಮಹಾನಗರ ಅಧ್ಯಕ್ಷ ಸಂಜಯ ಕಪಟಕರ,ಶಿವು ಮೆಣಸಿನಕಾಯಿ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ 40ಕ್ಕೂ ಹೆಚ್ಚು ಕಮಲ ಪಡೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಸವರಾಜ ಅಮ್ಮಿನಬಾವಿ, ಸಂತೋಷ ಅರಕೇರಿ, ಪ್ರೀತಮ್ ಅರಕೇರಿ,ಅಕ್ಷಯ ಬದ್ದಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿದ್ದರು. ಬಳಿಕ ಕೆಲ ಕಾರ್ಯಕರ್ತರು ಪೊಲೀಸರನ್ನು ತಪ್ಪಿಸಿ ರಸ್ತೆಯಲ್ಲಿ ಕಟ್ಟಿದ್ದ ಕಾಂಗ್ರೆಸ್ ಪಕ್ಷದ ಬಂಟಿಗ್ಸ್ ಹಾಗೂ ಬ್ಯಾನರ್ ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿ ಇನ್ನೂ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದಾಗ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ಹಾಗೂ ನೂಕುನುಗ್ಗಲು ನಡೆಯಿತು.
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು.ರಜತ ಉಳ್ಳಾಗಡ್ಡಿಮಠ, ವಿನೋದ ಅಸೂಟಿ ಸೇರಿದಂತೆ ಮುಂತಾದವರ ಜತೆ ಬಿಜೆಪಿಯವರು ವಾಗ್ವಾದ ನಡೆಸಿದರು. ಈ ಸಂದರ್ಭದಲ್ಲಿ ಪೋಲಿಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಂತರ ಎರಡು ಪಕ್ಷದವರನ್ನು ನಿಯಂತ್ರಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರ ಕಾರ್ಯಕ್ರಮ ಇದ್ದುದರಿಂದ ಭಾರಿ ಪ್ರಮಾಣದಲ್ಲಿ ಕೈ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ನಿನ್ನೆ ಕೊಡಗು, ಚಿಕ್ಕಮಗಳೂರಿನ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಏರ್ಪಡಿಸಿದ್ದರು.