ಹುಬ್ಬಳ್ಳಿ-ಧಾರವಾಡ ಸುದ್ದಿ

66 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್!; ಎಸ್‌ಡಿಎಂ ಮೆಡಿಕಲ್ ಕಾಲೇಜಿನ 2 ಹಾಸ್ಟೇಲ್ ಸೀಲ್ ಡೌನ್

ಧಾರವಾಡ : ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವಾಗಲೇ ಪೇಡೆನಗರಿಯ ಸತ್ತೂರ ಬಡಾವಣೆಯಲ್ಲಿರುವ ಎಸ್‌ಡಿಎಂ  ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಿದಾಗ, ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಸತ್ತೂರಿನ ಎಸ್.ಡಿ.ಎಂ.ವೈದ್ಯಕೀಯ ಕಾಲೇಜು ಆವರಣಕ್ಕೆ ಭೇಟಿ ನೀಡಿ, ಹಾಸ್ಟೇಲು ಸೀಲ್ ಡೌನ್ ಪ್ರದೇಶ ಪರಿಶೀಲಿಸಿ, ಸಂಸ್ಥೆಯ ಆಡಳಿತ ಮಂಡಳಿಯೊAದಿಗೆ ಚರ್ಚಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಎಸ್ ಡಿಎಂ ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಎಲ್ಲ 400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಸ್ವಾ÷್ಯಬ್ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಎರಡು ಹಾಸ್ಟೇಲುಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರು ಎರಡು ಡೋಸ್ ಲಸಿಕೆ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡು ಬಂದಿಲ್ಲ, ಔಷಧೋಪಚಾರ,ಚಿಕಿತ್ಸೆ ನಡೆಯುತ್ತಿದೆ ಎಂದರು.

ಕಳೆದ 17 ನೇ ತಾರೀಕಿನಂದು ಕಾಲೇಜಿನ ಆವರಣದ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಹಲವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸಂಸ್ಥೆಯ 400 ಪದವಿ ವಿದ್ಯಾರ್ಥಿಗಳಲ್ಲಿ ಈಗಾಗಲೇ 300 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ವರದಿ ಬಂದಿದ್ದು 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.ಉಳಿದ 100 ವಿದ್ಯಾರ್ಥಿಗಳ ಸ್ವಾ÷್ಯಬ್ ಸಂಗ್ರಹಿಸಿ ತಪಾಸಣೆ ಗೊಳಪಡಿಸಲಾಗುತ್ತಿದೆ. ಎರಡು ಹಾಸ್ಟೇಲುಗಳನ್ನು ಸೀಲ್ ಡೌನ್ ಮಾಡಿ, ಸೋಂಕಿತರನ್ನು ಪ್ರತ್ಯೇಕವಾಗಿ ಇಡಲಾಗಿದೆ.ತಪಾಸಣೆಗೆ ಒಳಪಟ್ಟವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಆವರಣದಲ್ಲಿರುವ ಎಲ್ಲಾ ವಿದ್ಯಾರ್ಥಿ ಗಳು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 3 ಸಾವಿರ ಸಿಬ್ಬಂದಿಯನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗುವುದು ಎಂದರು.

ಜಿಲ್ಲಾಡಳಿತ, ಆರೋಗ್ಯ ಮತ್ತು ಕುಂಟು0ಬ ಕಲ್ಯಾಣ ಇಲಾಖೆ,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ,ಪೊಲೀಸ್ ಹಾಗೂ ಎಸ್ ಡಿ ಎಂ ಆಡಳಿತ ಮಂಡಳಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ  ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿವೆ. ಸದ್ಯ ಸೋಂಕು ವಿದ್ಯಾರ್ಥಿಗಳಲ್ಲಿ ಮಾತ್ರ ಕಾಣಿಸಿಕೊಂಡಿರುವುದರಿAದ ಈ ವಲಯದಲ್ಲಿ ನಿಯಂತ್ರಿಸಲಾಗುತ್ತಿದೆ. ಕಾಲೇಜಿನ ವೈದ್ಯಕೀಯ ವಿಭಾಗವು ತೀವ್ರ ನಿಗಾವಹಿಸಿ, ಚಿಕಿತ್ಸೆ, ಔಷಧೋಪ ಚಾರ ನೀಡುತ್ತಿದೆ ಎಂದರು.

ಎಸ್‌ಡಿಎo ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ರತ್ನಮಾಲಾ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು.

 

ಸಂಪರ್ಕಿತರ ತಪಾಸಣೆಗೆ ಸೂಚನೆ

ಕಾಲೇಜಿನ ಅವರಣದ ಕಲಾಕ್ಷೇತ್ರದಲ್ಲಿ ಕಳೆದ ನ.17 ರಂದು ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ವ್ಯಕ್ತಿಗಳ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ತಪಾಸಣೆಗೆ ಒಳಪಟ್ಟು ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಮದುವೆ, ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಕೈ ಬಿಡುವುದು ಉತ್ತಮ, ಅನಿವಾರ್ಯವಿದ್ದರೆ ಮಾಸ್ಕ್ ಧರಿಸಿ,ಸ್ಯಾನಿಟೈಸರ್ ಬಳಸಿ, ಸುರಕ್ಷಿತ ಅಂತರದ ನಿಯಮಗಳನ್ನು ಪಾಲಿಸಿ, ಜನಸಂದಣಿಯಾಗದAತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

 

ಹೆಗ್ಗಡೆ ಜನ್ಮದಿನಾಚರಣೆ ರದ್ದು

ಧಾರವಾಡ: ಇಲ್ಲಿಯ ಎಸ್‌ಡಿಎಂ ಮೆಡಿಕಲ್ ಕಾಲೇಜಿನ 84 ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿAದ ಇಂದು ನಡೆಯ ಬೇಕಾಗಿದ್ದ ಬಹುತೇಕ ಕಾರ್ಯಕ್ರಮಗಳನ್ನು ಆಡಳಿತ ಮಂಡಳಿ ರದ್ದು ಪಡಿಸಿದೆ. ಇಷ್ಟೇ ಅಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 74 ನೇ ಜನ್ಮದಿನಾಚರಣೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

 

administrator

Related Articles

Leave a Reply

Your email address will not be published. Required fields are marked *