ಹುಬ್ಬಳ್ಳಿ: ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಕ್ಷಣಕ್ಕೊಂದು ಬಣ್ಣ ಪಡೆಯುತ್ತಿದೆ.ನಿತ್ಯವೂ ಪ್ರತಿಭಟನೆಗಳು ನಡೆಯುತ್ತಿವೆ. ತನ್ಮಧ್ಯೆ ಕೊಲೆಯಾದ ನೇಹಾಳ ಮರಣೋತ್ತರ ವರದಿ( ಪೋಸ್ಟಮಾರ್ಟಮ್) ಬಿಡುಗಡೆಯಾಗಿದ್ದು ಆರೋಪಿ ಫಯಾಜ್, ನೇಹಾಳಿಗೆ 14 ಬಾರಿ ಚಾಕುವಿನಿಂದ ಇರಿದಿದ್ದಾನೆಂಬ ಸಂಗತಿ ಬೆಳಕಿಗೆ ಬಂದಿದೆ.
ಮೊದಲು 9 ಬಾರಿ ಇದಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಶವಪರೀಕ್ಷೆಯಲ್ಲಿ ಅಸಲಿ ಸಂಗತಿ ಬಯಲಾಗಿದೆ. ಇದಲ್ಲದೇ ನೇಹಾಳ ಕತ್ತಿನ ಭಾಗದಲ್ಲಿರುವ ರಕ್ತನಾಳ ತುಂಡಾಗಿದೆ ಎನ್ನಲಾಗಿದೆ. ಅತಿಯಾದ ರಕ್ತಸ್ರಾವದಿಂದಲೇ ಆಕೆ ಮೃತಪಟ್ಟಿರುವುದಾಗಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿದ್ದಾರೆನ್ನಲಾಗಿದ್ದು,ನೇಹಾಳ ಹೃದಯಕ್ಕೂ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಹೇಳಲಾಗಿದೆ.