ಹುಬ್ಬಳ್ಳಿ-ಧಾರವಾಡ ಸುದ್ದಿ

ಶಕ್ತಿ ಯೋಜನೆ ವಿರೋಧಿಸಿ ಆಟೋ ಚಾಲಕರು ಹಾಗೂ ಮಾಲೀಕರು ಆಟೋ ಸಂಚಾರ ಬಂದ್ ಮಾಡಿ ಪ್ರತಿಭಟನೆ

ಆಟೋ ಚಾಲಕರ ಬೇಡಿಕೆ: ಸಿಎಂ ಜೊತೆ ಚರ್ಚೆ

ಪ್ರತಿಭಟನಾನಿರತರಿಗೆ ಸಚಿವ ಲಾಡ್ ಭರವಸೆ

ಹುಬ್ಬಳ್ಳಿ: ಆಟೋ ಚಾಲಕರ ಬೇಡಿಕೆಗಳ ಕುರಿತು ನೇರವಾಗಿ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.


ಶಕ್ತಿ ಯೋಜನೆ ವಿರೋಧಿಸಿ ಆಟೋ ಚಾಲಕರು ಹಾಗೂ ಮಾಲೀಕರು ಹು-ಧಾ ದಲ್ಲಿ ಆಟೋ ಸಂಚಾರ ಬಂದ್ ಮಾಡಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ, ಆಟೋ ಚಾಲಕರ ಸಂಕಷ್ಟ ಆಲಿಸಿ ನಂತರ ಮಾತನಾಡಿದ ಅವರು, ಸಾರಿಗೆ ಸಚಿವರ ಸಭೆಯಲ್ಲಿ ಯಾವ ತೀರ್ಮಾನವಾಗುತ್ತದೆ ಕಾದು ನೋಡಬೇಕು. ಸರ್ಕಾರದ ಪ್ರತಿನಿಧಿಯಾಗಿ ನಾನು ಮನವಿ ಸ್ವೀಕರಿಸಿದ್ದೇನೆ. ಆಟೋ ಚಾಲಕರ ಬೇಡಿಕೆಗಳ ಕುರಿತಂತೆ ಮುಂದಿನ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ತಗೆದುಕೊಳ್ಳಲಿದ್ದು, ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.


ಶಕ್ತಿ ಯೋಜನೆಯಿಂದಾಗಿ ನಾವು ಜೀವನ ನಡೆಸುವುದು ಕಷ್ಟಕರವಾಗಿದ್ದು, ಈ ನಿಟ್ಟಿನಲ್ಲಿ ನಗರ ಪ್ರದೇಶದ ೨೦ ಕಿಲೋ ಮೀಟರ್ ಒಳಗೆ ಶಕ್ತಿ ಯೋಜನೆಗೆ ಅವಕಾಶ ನೀಡಬಾರದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಆಗ್ರಹಿಸಿದರು. ಇನ್ನೂ ಎಲ್ಲಾ ಆಟೋ ಚಾಲಕರಿಗೆ ಕಾರ್ಮಿಕರ ಕಾರ್ಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು

ಹುಬ್ಬಳ್ಳಿಯ ರಿಕ್ಷಾ ಚಾಲಕರು ಮತ್ತು ಮಾಲಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ, ಕಾಂಗ್ರೆಸ್ ಮುಖಂಡ ಮಹೇಂದ್ರ ಸಿಂಘಿ ಇತರರು ಇದ್ದರು.

ಶಕ್ತಿ ಯೋಜನೆಗೆ ವಿರೋಧಿಸಿ ಹು-ಧಾ ಅವಳಿನಗರದಲ್ಲಿ ಸಾವಿರಾರು ಆಟೋ ಸಂಚಾರ ಸ್ಥಗಿತಗೊಳಿಸಿ,ನಗರದ ಚೆನ್ನಮ್ಮ ವೃತ್ತದಲ್ಲಿ ನೂರಾರು ಆಟೋ ಚಾಲಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆಟೋ ಚಾಲಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಆಗ್ರಹಿಸಿದರು. ಪ್ರತಿಭಟನೆಯಿಂದಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಟೊ ಸಂಚಾರ ಸಂಪೂರ್ಣ ಬಂದಾಗಿತ್ತು.

administrator

Related Articles

Leave a Reply

Your email address will not be published. Required fields are marked *