ಹುಬ್ಬಳ್ಳಿ-ಧಾರವಾಡ ಸುದ್ದಿ

ಧಾರವಾಡ ಸರ್ಕಾರಿ ಕಾಲೇಜಿನಲ್ಲಿ ’ಬಿಸಿಎ’ ಆರಂಭ

ಸಿಎಂ ಮನವೋಲಿಸಿದ ಶಾಸಕ ವಿನಯ ಕುಲಕರ್ಣಿ

ಬೆಂಗಳೂರು: ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಯಶಸ್ವಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮನವೋಲಿಸಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಿಸಿಎ ಕೋರ್ಸ್ ಅನ್ನು ಪ್ರಾರಂಭಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.


ಶಾಸಕರಾದ ವಿನಯ ಕುಲಕರ್ಣಿಯವರಿಗೆ ವಿದ್ಯಾರ್ಥಿಗಳಿಗಿರುವ ಕಾಳಜಿಯಿಂದ ಧಾರವಾಡದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ್ ಆರಂಭಿಸಲು ಅವಕಾಶ ಸಿಕ್ಕಿದೆ.

ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಬಿಸಿಎ ಕೋರ್ಸ್ ಮಂಜೂರಾತಿ ಪಡೆದು ಧಾರವಾಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ವಿನಯ ಕುಲಕರ್ಣಿಯವರು ವಿನಂತಿ ಮಾಡಿಕೊಂಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *