ಹುಬ್ಬಳ್ಳಿ-ಧಾರವಾಡ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಸೆಂಟ್ ಮೈಕೆಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಇಂದು ನಡೆದಿದೆ.


ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದ ವೇಳೆಯಲ್ಲಿಯೇ ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿ ಆತಂಕ ಸೃಷ್ಟಿಸಿವೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಗ್ಗು ಹೊತ್ತು ಬೆಂಕಿ ಹಚ್ಚಿ ಹೆಜ್ಜೇನು ದಾಳಿಯಿಂದ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಶಾಲೆಯ ಅಕ್ಕಪಕ್ಕದ ಮನೆಯವರು ವಿದ್ಯಾರ್ಥಿಗಳ ಮೈಗೆ ಹೊದಿಕೆಗಳನ್ನು ಮುಚ್ಚಿ ಹೆಜ್ಜೇನುಗಳ ದಾಳಿ ತಪ್ಪಿಸಿದ್ದಾರೆ.


ಜೇನು ನೊಣಗಳು ಏಕಾಏಕಿ ದಾಳಿ ನಡೆಸಲು ಕಿಡಿಗೇಡಿಗಳ ಕೃತ್ಯವೇ ಕಾರಣ ಎಂಬುದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಐವರನ್ನು ನಗರದ ಕಿಮ್ಸ್ ಆಸ್ಪತ್ರೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಎಸಿಪಿ ವಿನೋದ ಮುಕ್ತೆದಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *