ಹುಬ್ಬಳ್ಳಿ-ಧಾರವಾಡ ಸುದ್ದಿ

ಬಿಜೆಪಿಗೆ ಪ್ರತಿಭಟಿಸುವ ನೈತಿಕತೆ ಇಲ್ಲ : ಶೆಟ್ಟರ್

ಡಿವಿಎಸ್ ಕೈ ಸೇರ್ಪಡೆ ಮಾಹಿತಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸದಾನಂದಗೌಡರು ಕಾಂಗ್ರೆಸ್ ಗೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಅವರನ್ನ ಸಂಪರ್ಕದಲ್ಲಿ ಇಲ್ಲ. ಅವರಾಗಾಲೇ ಮಾತನಾಡಿದರೇ ಮಾತನಾಡುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.


ನಗರದಲ್ಲಿಂದು ಮಾತನಾಡಿದ ಅವರು, ಸದಾನಂದಗೌಡರ ಜೊತೆಗೆ ನಾನು ಯಾವುದೇ ರೀತಿಯ ಮಾತನಾಡಿಲ್ಲ. ಪಂಚ ರಾಜ್ಯಗಳಿಗೆ 1000 ಕೋಟಿ ಹಣ ಸಂಗ್ರಹ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಇದೊಂದು ಆಧಾರ ರಹಿತ ಆರೋಪ. ಆದಾಯ ತೆರಿಗೆ ಯಾರ ಕೈಯಲ್ಲಿ ಇದೆ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒಬ್ಬ ಜವಾಬ್ದಾರಿಯುತ ನಾಯಕರು. ಅವರು ಯಾವ ಆಧಾರದ ಮೇಲೆ ಹೇಳಿದರು ಗೊತಿಲ್ಲ. ಈ ಬಗ್ಗೆ ಸ್ಪಷ್ಟತೆ ಮಾಡಬೇಕು. ಆದಾಯ ತೆರಿಗೆ ಇಲಾಖೆ ಯಾರ ಕೈಯಲ್ಲಿ ಇದೆ. ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸಿದ ಹಾಗೇ, ಯಾವುದೇ ಆದಾಯ ತೆರಿಗೆ ಇಲಾಖೆಯಿಂದ ಮಾಹಿತಿ ಕೊಟ್ಟಿಲ್ಲ. ಸಂಬಂಧಿಸಿದ ಇಲಾಖೆ ಯಾರ ಹಣ ಅಂತ ಮಾಹಿತಿ ಕೊಡಲಿ. ಅದು ಯಾರಿಗೆ ಸೇರಿದ್ದು ಮೊದಲು ಹೇಳಲಿ. ನಂತರ ಅದರ ಬಗ್ಗೆ ಚರ್ಚೆ ಆಗಲಿ ಎಂದರು.
ಕೆಪಿಸಿಸಿ ಕರೆಪ್ಷನ್ ಕಮಿಟಿ ಎಂಬ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ನಿಮಗೆ. ನಿಮ್ಮ ಮೇಲೆ ಭ್ರಷ್ಟಾಚಾರ ಆಪಾದನೆ ಬಂದು ಜನ ತಿರಸ್ಕರಿಸಿ ನಿಮ್ಮನ್ನು ಮನೆಗೆ ಕಳಿಸಿದ್ದಾರೆ. ಈಗ ನಿಮಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಕ್ಕೆ ಏನು ಹಕ್ಕಿದೆ ಎಂದು ತಿರುಗೇಟು ನೀಡಿದರು.

ಗುತ್ತಿಗೆದಾರರ ಮನೆಯಲ್ಲೇ ಹಣ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಂಘ ಬೇರೆ, ವ್ಯಕ್ತಿ ಬೇರೆ. ಸಂಘ ಹೋರಾಟ ಮಾಡಿದೆ. ವೈಯಕ್ತಿಕವಾಗಿ ಹಾಗೂ ಸಂಘ ಎರಡನ್ನೂ ಹೋಲಿಕೆ ಮಾಡಲು ಆಗಲ್ಲ. ಎಲ್ಲಾದರೂ ಹಣದ ಬಗ್ಗೆ ಸಂಪೂರ್ಣ ತನಿಖೆ ಆಗಲಿ. ತಪ್ಪು ಮಾಡಿದವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿ. ಅದು ಬರೋಕ್ಕೂ ಮುಂಚೆನೇ ಸಿಬಿಐ ತನಿಖೆ ಅಂತಾರೆ. ಉಚಿತವಾಗಿ ವಿದ್ಯುತ್ ಕೊಡುವುದರಿಂದ ಲೋಡ್ ಶೆಡ್ಡಿಂಗ್ ಆಗೋದಿಲ್ಲ. ಮಳೆ ಇಲ್ಲ, ಮಳೆ ನೀರು ಇಲ್ಲದೆ ವಿದ್ಯುತ್ ಉತ್ಪಾದನೆ ಆಗಿಲ್ಲ. ಉಚಿತವಾಗಿ ಕೊಟ್ರೆ ರಾಜ್ಯ ಬಜೆಟ್ ನಿಂದ ಹಣ ಕೊಡ್ತಾರೆ. ವಿದ್ಯುತ್ ಇಲ್ಲಾ ಅಂದ್ರೆ, ನೀರು ಇಲ್ಲದಕ್ಕೆ ಆಗ್ತಿಲ್ಲ ಎಂದರು.
ಜೋಶಿ ಕೇಂದ್ರದಿಂದ ಕಲ್ಲಿದ್ದಲು ಕೊಟ್ಟಿದ್ದೀವಿ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿ,ಎಲ್ಲಾ ಸರ್ಕಾರ ಇದ್ದಾಗಲೂ ಹೆಸ್ಕಾಂ, ಬೆಸ್ಕಾಮ್ ಎಲ್ಲಾ ಲಾಸ್ ನಲ್ಲೆ ಇವೆ. ಬಿಜೆಪಿ ಸರ್ಕಾರ ಇದ್ದಾಗ ಏನು ಲಾಭದಲ್ಲಿತ್ತಾ. ಯಾವಾಗಲೂ ಪರಿಸ್ಥಿತಿ ಹಾಗೇ ಇತ್ತು. ಸಾಲ ತಗೊಂಡೆ ಮಾಡೋದು ಎಂದರು.


ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಭಟನೆ ಮಾಡಲು ನಿಮಗೇನು ನೈತಿಕತೆ ಇದೆ. ಕಳೆದ ಬಾರಿ ಬೊಮ್ಮಾಯಿ ಸರ್ಕಾರಕ್ಕೂ ಭ್ರಷ್ಟಾಚಾರದ ಆರೋಪ ಬಂತು. 40%, ಪೇ ಸಿಎಂ ಎಲ್ಲಾ ಕಡೆಗಳಲ್ಲೂ ಭ್ರಷ್ಟಾಚಾರ ನಡಿತಾ ಇದೆ ಅಂತ ಜನ ಮಾತಾಡಲಿಕ್ಕೆ ಶುರು ಮಾಡಿದರು. ಗುತ್ತಿಗೆದಾರರು ಆರೋಪವನ್ನು ಮಾಡಿದರು. ನಿಮಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಮಾಡಲಿಕ್ಕೆ ಆಗಲಿಲ್ಲ. ಯಾರ ನೇತೃತ್ವದಲ್ಲಿ ಪ್ರತಿಭಟನೆ ಮಾಡ್ತೀರಿ ನೀವು. ನಿಮ್ಮ ವಿರುದ್ಧ ಪಕ್ಷದ ನಾಯಕ ಯಾರು. ಸುಮ್ಮನ್ನೆ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡೋದ್ರಲ್ಲಿ ಅರ್ಥ ಇಲ್ಲ ಎಂದರು.

 

administrator

Related Articles

Leave a Reply

Your email address will not be published. Required fields are marked *