ವಿಧಾನಸಭೆಯ ಚುನಾವಣಾ ಪ್ರಚಾರದಲ್ಲಿ ಕಳೆದ 15 ದಿನಗಳಿಂದ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರ ಸುತ್ತಿ ಮತದಾರರ ಮನೆ ಬಾಗಿಲು ತಟ್ಟಿ ಮನಗೆಲ್ಲಲು ಯತ್ನಿಸಿದ್ದ ಜಿಲ್ಲೆಯ ವಿವಿಧ ಪಕ್ಷಗಳ ಹುರಿಯಾಳುಗಳು ಇಂದು ಕುಟುಂಬದ ಸದಸ್ಯರೊಂದಿಗೆ ನಿರಾಳವಾಗಿ ಹೊತ್ತು ಕಳೆದು ಬೆಂಬಲಿಗರ ಜತೆ ಗೆಲುವಿನ ಲೆಕ್ಕಾಚಾರ ಚರ್ಚೆಸಿದರೆ, ಇನ್ನು ಕೆಲವರು ತಮ್ಮ ನೆಚ್ಚಿನ ಸಾಕು ಪ್ರಾಣಿಗಳೊಂದಿಗೆ ಕಾಲ ಕಳೆದರು.
ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರು ಸಾಕು ಪ್ರಾಣಿಗಳೊಂದಿಗೆ ಕಾಲ ಕಳೆದರು.
ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಪುತ್ರಿಯರಾದ ವೈಶಾಲಿ ದೀಪಾಲಿ ಹಾಗೂ ಪುತ್ರ ಹೇಮಂತ ಸಾಕು ಪ್ರಾಣಿಗಳೊಂದಿಗೆ ಸಮಯ ಕಳೆದರು.
ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ ಜನರೊಂದಿಗೆ ಚರ್ಚೆ ನಡೆಸಿದರು.
ನವಲಗುಂದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ಕುಟುಂಬದೊಂದಿಗೆ
ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪತ್ನಿ ಪ್ರೀಯಾ ಅವರೊಂದಿಗೆ ಚರ್ಚೆಯಲ್ಲಿ
ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ ಅಬ್ಬಯ್ಯ ಕುಟುಂಬದೊಂದಿಗೆ ಕಾಲ ಕಳೆದರು.
ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ ಅವರು ಕುಟುಂಬದೊಂದಿಗೆ ಕಾಲ ಕಳೆದರು.