ಹುಬ್ಬಳ್ಳಿ-ಧಾರವಾಡ ಸುದ್ದಿ
ಕಳಸಾ ಬಂಡೂರಿಗೆ ಹಸಿರು ನಿಶಾನೆ

ಕಳಸಾ ಬಂಡೂರಿಗೆ ಹಸಿರು ನಿಶಾನೆ

ವಿಸ್ತೃತಾ ಯೋಜನಾ ವರದಿಗೆ ಜಲ ಆಯೋಗ ಸಮ್ಮತಿ

ಜ.2ರ ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಟಾಂಗ್

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವು ಜನವರಿ 2 ರಂದು ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ಮಾಡಲು ಸಿದ್ಧತೆ ನಡೆಸಿರುವಾಗಲೇ ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಇಂದು ಅನುಮತಿಯನ್ನು ನೀಡಿದೆ.
ಉತ್ತರ ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಭಾರತ ಸರಕಾರದಿಂದ ಅನುಮೋದನೆ ದೊರಕಿದ್ದು, ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ ಜಿಲ್ಲಾ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ನೀರೊದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.
ಯೋಜನೆ ಜಾರಿಯ ಸಂಬಂಧ ಪರಿಷ್ಕೃತ ಡಿಪಿಆರ್‌ಗೆ ಅರಣ್ಯ ಇಲಾಖೆ ಯಿಂದ ಈಗಾಗಲೇ ಗ್ರೀನ್ ಸಿಗ್ನಲ್ ದೊರಕಿದ್ದು, ಕೇಂದ್ರ ಜಲಮಂಡಳಿ ಸಿಡಬ್ಲೂಸಿ ಇದೀಗ ಅನುಮೋದನೆ ನೀಡಿದೆ.

ಮಹದಾಯಿ ನದಿ ತಿರುವು ಯೋಜನೆಯ ಮಹತ್ವಾಕಾಂಕ್ಷಿ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆ ಜಾರಿಗೆ ನೆರೆಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳು ತಕರಾರು ಎತ್ತಿದ್ದು, ಪ್ರಕರಣ ನ್ಯಾಯಾಲಯದಲ್ಲಿದ್ದು, ಇದೀಗ ಕೇಂದ್ರ ಸರಕಾರ ಕರ್ನಾಟಕ ಸರಕಾರದ ಮನವಿಗೆ ತೀವ್ರ ರೀತಿಯಲ್ಲಿ ಸ್ಪಂದನೆ ಮಾಡಿದ ಪರಿಣಾಮ ಕಳಸಾ ಬಂಡೂರಿ ಯೋಜನೆ ತ್ವರಿತಗತಿಯಲ್ಲಿ ಜಾರಿಯಾಗಲು ಸಿದ್ಧತೆ ಪೂರ್ಣಗೊಂಡಾತಾಗಿದೆ.
ಈ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಜೋಶಿ ಅನಂತ ಧನ್ಯವಾದಗಳು ತಿಳಿಸಿದ್ದಾರೆ.


ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡದ್ವಿ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ನಾನು ಬೊಮ್ಮಾಯಿ, ಗೋವಿಂದ್ ಕಾರಜೋಳ, ಬಿ.ಎಸ್.ಯಡಿಯೂರಪ್ಪ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇದೀಗ, ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ದೊರೆಕಿಸಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಟಾಂಗ್ ನೀಡಿದ್ದು, ಜ.2ರಂದು ಹುಬ್ಬಳ್ಳಿಯ ಮಹದಾಯಿ ಸಮಾವೇಶದಲ್ಲಿ ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು ಲಕ್ಷಾಂತರ ಜನ ಸೇರಲಿದ್ದಾರೆ.

administrator

Related Articles

Leave a Reply

Your email address will not be published. Required fields are marked *