ಹುಬ್ಬಳ್ಳಿ-ಧಾರವಾಡ ಸುದ್ದಿ

ಬಿಜೆಪಿಯೊಂದಿಗೆ ’ಕೈ’ ಜೋಡಿಸಿಲ್ಲ

ಹುಬ್ಬಳ್ಳಿ: ನವಲಗುಂದ ಪುರಸಭೆಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಧಾರವಾಡ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.


ಎಂತಹ ಪರಿಸ್ಥಿತಿ ಎದುರಾದರೂ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುವುದಿಲ್ಲ. ನವಲಗುಂದ ಪುರಸಬೆ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿಯವರೇ ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಇದೀಗ ೧೭ ಸದಸ್ಯರ ಬಹುಮತ ಕಾಂಗ್ರೆಸ್‌ಗೆ ಇದ್ದು, ನಮ್ಮ ಪಕ್ಷದ ಅಭ್ಯರ್ಥಿಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದಾರೆ ಎಂದರು.
ಇನ್ನು ಈ ಹಿಂದೆ ಕಾಂಗ್ರೆಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೇ ಆಗಲೇ ಧ್ವನಿ ಎತ್ತಬೇಕಿತ್ತು. ಆದರೆ ಜೆಡಿಎಸ್‌ನವರು ಅಧಿಕಾರಕ್ಕೆ ಬರಬಾರದೆಂದು ನಮಗೆ ಬೆಂಬಲ ನೀಡಿದ್ದಾರೆ ಹೊರತು ನಮ್ಮ ಪಕ್ಷದ ಯಾವುದೇ ಸದಸ್ಯರು ಬಿಜೆಪಿಯೊಂದಿಗೆ ಕೈಜೋಡಿಸಿಲ್ಲ. ಹಾಗಾಗಿ ಇದೀಗ ಅವರೊಂದಿಗೆ ಕೈಜೋಡಿಸಿದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್.ಟಿ.ಅಧ್ಯಕ್ಷ ನಾಗರಾಜ್ ಹೆಗ್ಗನವರ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ರೋಹಿತ್ ಘೋಡಕೆ, ಬಿಸ್ತು ಬೆಳಗಾಂಕರ್, ಬಸವರಾಜ ಇದ್ದರು.

ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುವೆ

ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಂಬಂಧ ಸೃಷ್ಟಿಯಾಗಿರುವ ಗೊಂದಲವನ್ನು ನಿವಾರಿಸುವಂತೆ ವರಿಷ್ಠರಿಗೆ ಮನವಿ ಮಾಡಲಾಗಿದೆ. ನಾನು ಕೂಡಾ ಹು-ಧಾ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದರು.

administrator

Related Articles

Leave a Reply

Your email address will not be published. Required fields are marked *