ಹುಬ್ಬಳ್ಳಿ : ಮುಂದಿನ ದಿನಗಳಲ್ಲಿ ಮಹದಾಯಿ, ಕೃಷ್ಣ, ಕಲ್ಯಾಣ ಕರ್ನಾಟಕದ 371 ಜೆ ಪರವಾಗಿ ಹೋರಾಟ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬದಾಮಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಮಹದಾಯಿ ಪಾದಯಾತ್ರೆ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆದಿದೆ. ಮೇಕೆದಾಟು ಪಾದಯಾತ್ರೆ ಮುಗಿಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ತಮ್ಮ ಅಧಿಕಾರದ ಸಂಧರ್ಬದಲ್ಲಿ ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಹೋರಾಟ ಮಾಡಿದ್ದರಲ್ಲದೇ ಅಧಿಕಾರಕ್ಕೆ ಬಂದ 24ಗಂಟೆಗಳಲ್ಲಿ ಮಹದಾಯಿ ಕಾಮಗಾರಿ ಜಾರಿಗೆ ತರುತ್ತೇವೆ.ರಕ್ತದಲ್ಲಿ ಬರೆದುಕೊಡುತ್ತೇನೆಂದು ಹೇಳಿದ್ದರು ಏನಾಯಿತು?
ಉತ್ತರ ಕರ್ನಾಟಕ ಭಾಗದ ಜನರಿಗೆ ನೀರು ಬಂತಾ ಎಂದು ಪ್ರಶ್ನೆ ಹಾಕಿದರು.
ಮೇಕೆದಾಟು ಪಾದಯಾತ್ರೆಯನ್ನ ಹತ್ತಿಕ್ಕಲು ವೀಕೆಂಡ್ ಕರ್ಪ್ಯೂ ಜಾರಿಗೆ ತರಲಾಯಿತು ಎಂದು ಆರೋಪಿಸಿದ ಅವರು ಕಾಂಗ್ರೆಸ್ ಪಾದಯಾತ್ರೆಯಿಂದ ಯಾವುದೇ ಕೋವಿಡ್ ಹರಡಿಲ್ಲ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಸೋಮಶೇಖರ್‌ಗೆ ಕೋವಿಡ್ ದೃಢಪಟ್ಟಿದ್ದು ನಮ್ಮ ಪಾದಯಾತ್ರೆಯಿಂದನಾ ಎಂದು ಸಿದ್ದು ಲೇವಡಿ ಮಾಡಿದರು. ಈ ವೇಳೆ ಉಭಯ ಅಧ್ಯಕ್ಷರಾದ ಅಲ್ತಾಫ್ ಹಳ್ಳೂರ, ಅನಿಲಕುಮಾರ ಪಾಟೀಲ, ಪಾಲಿಕೆ ಸದಸ್ಯ ನಿರಂಜನಯ್ಯಾ ಹಿರೇಮಠ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ, ಶರಣಪ್ಪ ಕೊಟಗಿ, ವಿನೋಧ ಅಸೂಟಿ ಮುಂತಾದವರಿದ್ದರು.