ಧಾರವಾಡ: ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಮಧ್ಯೆ ಕಳೆದ ದಿ. 8 ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ನಗರ ಶಾಖೆಯ ಆಡಳಿತಾಧಿಕಾರಿ ಎಸ್. ರಾಧಾಕೃಷ್ಣ ಅವರು 50 ಕ್ಕೂ ಅಧಿಕ ಜನರ ವಿರುದ್ಧ ದೂರು ನೀಡಿದ್ದು, ಅನಧೀಕೃತವಾಗಿ ಸಭೆಯ ಆವರಣ ಪ್ರವೇಶ ಮಾಡಿ ಗದ್ದಲ ವುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಕಳೆದ 2020 ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿದ್ದ ಹೊಸ ಆಡಳಿತ ಮಂಡಳಿಯ ಅಧಿಕಾರಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು.
ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯ ಹಿನ್ನೆಲೆಯಲ್ಲಿ ಅರ್ಜಿದಾರರು ತಡೆಯಾಜ್ಞೆಯ ಪ್ರತಿಯನ್ನು ಸಭೆಯ ಕಚೇರಿಗೆ ಸಲ್ಲಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಎರಡೂ ಗುಂಪುಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದಿತ್ತು.
ಇದೀಗ ೫೦ ಕ್ಕೂ ಅಧಿಕ ಜನರ ವಿರುದ್ಧ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ನಗರ ಶಾಖೆಯ ಆಡಳಿತಾಧಿಕಾರಿ ಎಸ್. ರಾಧಾಕೃಷ್ಣ ಅವರು ಉಪನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದಾರೆ.