ಹುಬ್ಬಳ್ಳಿ-ಧಾರವಾಡ ಸುದ್ದಿ
ಗ್ರಾಮೀಣ ಜನರ ಸಮಸ್ಯೆಗೆ ಜಿಲ್ಲಾಡಳಿತದ ಸ್ಪಂದನೆ

ಗ್ರಾಮೀಣ ಜನರ ಸಮಸ್ಯೆಗೆ ಜಿಲ್ಲಾಡಳಿತದ ಸ್ಪಂದನೆ

’ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ

ಧಾರವಾಡ : ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಪರಿಹಾರವಾಗಬೇಕಾಗಿರುವ ಸಾರ್ವಜನಿಕರ ಅಹವಾಲುಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವರದಾನವಾಗಿದ್ದು, ಗ್ರಾಮೀಣ ಜನರ ಸಮಸ್ಯೆಗಳ ಸ್ಪಂದನೆಗೆ ಜಿಲ್ಲಾಡಳಿತ ಆದ್ಯತೆ ನೀಡುತ್ತಿವೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.


ತಾಲೂಕಿನ ತಡಕೋಡದ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕೆಳಹಂತದಿಂದ ಪ್ರಾರಂಭವಾಗಿ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಒಂದು ಹಳ್ಳಿಯಲ್ಲಿ ಇದ್ದು ಸ್ಥಳೀಯ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಪರಿಹರಿಸಲು ಕ್ರಮವಹಿಸಲಾಗುವುದು.
ಇದೇ ಸಂದರ್ಭದಲ್ಲಿ ಆರೋಗ್ಯ ಕಾರ್ಯಕ್ರಮವೂ ನಡೆಯುವುದರಿಂದ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ವಿತರಿಸಲಾಗುತ್ತಿದೆ.ಸಾರ್ವಜನಿಕರು ಆಡಳಿತಾತ್ಮಕ ಕಾರಣದಿಂದ ತಾಲೂಕು, ಜಿಲ್ಲಾ ಹಂತದಲ್ಲಿ ವಿಳಂಬವಾಗಿರುವ ಸಮಸ್ಯೆಗಳನ್ನು ಈ ಕಾರ್ಯಕ್ರಮದ ಮೂಲಕ ಪರಿಹರಿಸಿಕೊಳ್ಳಬಹುದು. ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಾಶನಕ್ಕೆ ನೀಡಿರುವ ಅರ್ಜಿಗಳನ್ನು ಕೂಡ ವಿಲೆ ಮಾಡಲಾಗುವುದು ಎಂದರು.
ಗ್ರಾ.ಪಂ.ಅಧ್ಯಕ್ಷೆ ಶ್ರೀದೇವಿ ಈರಪ್ಪ ಬೆಳವಡಿ, ಉಪಾಧ್ಯಕ್ಷ ಯಲ್ಲಪ್ಪ ಹೊಳೆಪ್ಪನವರ, ಪ್ರಭಾರ ಉಪವಿಭಾಗಾಧಿಕಾರಿ ಮಾಧವ ಗಿತ್ತೆ, ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಜಗಲಾಸರ್, ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಚೌಡಣ್ಣವರ, ಗ್ರಾ.ಪಂ.ಸದಸ್ಯರು, ಮುಖಂಡರು, ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.

ಅಹವಾಲುಗಳಿಗೆ ಸ್ಪಂದನೆ

ಪ್ರಾಥಮಿಕ ಆರೋಗ್ಯ ಕೇಂದ್ರ, ಪದವಿ ಪೂರ್ವ ಕಾಲೇಜು ಸ್ಥಾಪನೆ,ತಿಮ್ಮಾಪುರ ಮಡ್ಡಿಯಲ್ಲಿ ವಾಸವಾಗಿರುವ ಜನರ ಹೆಸರಿಗೆ ಮನೆಗಳ ಹಕ್ಕು ನೀಡುವುದು, ಟಾಟಾ ಮಾರ್ಕೊಪೊಲೊ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸಿ , ಕಾರ್ಖಾನೆಯ ಆಡಳಿತ ಮಂಡಳಿಯೊಂದಿಗೆ ಮಧ್ಯಸ್ಥಿಕೆ ವಹಿಸಿ ಕಾರ್ಮಿಕರ ಬೇಡಿಕೆಗೆ ಸ್ಪಂದಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.


ಮನವಿಗೆ ಪ್ರತಿಕಿಯಿಸಿದ ಜಿಲ್ಲಾಧಿಕಾರಿಗಳು, ಟಾಟಾ ಮಾರ್ಕೊಪೊಲೊ ಕಾರ್ಮಿಕರ ಹೋರಾಟ ಜಿಲ್ಲಾಡಳಿತ, ಸರ್ಕಾರ ಗಮನ ಹರಿಸಿದೆ. ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ಮಧ್ಯಸ್ಥಿಕೆ ವಹಿಸಿ ಪರಿಹರಿಸಲು ಕಾರ್ಖಾನೆ ಹಾಗೂ ಕಾರ್ಮಿಕರನ್ನು ಚರ್ಚೆಗೆ ಆಹ್ವಾನಿಸಲಾಗಿದೆ. ತಡಕೋಡದ ತಿಮ್ಮಾಪುರ ಮಡ್ಡಿ ಪ್ರದೇಶದ ೭೩ ನಿವೇಶನಗಳಲ್ಲಿ ವಾಸವಾಗಿ, ಈಗಾಗಲೇ ಮನೆ ನಿರ್ಮಿಸಿಕೊಂಡಿರುವವ ಹೆಸರಿಗೆ ಹಕ್ಕು ಪತ್ರ ಕೊಡಬೇಕು. ಉಳಿದ ನಿವೇಶನಗಳನ್ನು ಅರ್ಹರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿನ ನಿವೇಶನ ರಹಿತರಿಗೆ ಸೂರು ಒದಗಿಸಲಾಗುವುದು ಎಂದರು.

ಮಹಿಳೆಯರ ಪ್ರತಿಭಟನೆ

ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಶ್ರೀದೇವಿ ಬೆಳವಡಿ. ಸದಸ್ಯ ಭೀಮಪ್ಪ ಕಾಸಾಯಿಯವರ ನೇತೃತ್ವದಲ್ಲಿ ಮಹಿಳೆಯರು ಹಳ್ಳಿಗಳಲ್ಲಿನ ಅಕ್ರಮ ಸಾರಾಯಿ ಮಾರಾಟ ನಿಗ್ರಹಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಮಂಜುಳಾ. ಹುಲಮನಿ, ಕಂಟೆಪ್ಪ ಕಲ್ಲೂರ. ದ್ಯಾಮವ್ವ. ವಡ್ಡರ, ದೊಡ್ಡವ್ವ ಕರೀಕಟ್ಟಿ ಮುಂತಾದವರು ಪ್ರತಿಭಟನೆಯಲ್ಲಿದ್ದರು.

administrator

Related Articles

Leave a Reply

Your email address will not be published. Required fields are marked *