ಹುಬ್ಬಳ್ಳಿ-ಧಾರವಾಡ ಸುದ್ದಿ
ಪ್ರತ್ಯೇಕ ಪಾಲಿಕೆ ಬೇಡಿಕೆ ನ್ಯಾಯ ಸಮ್ಮತ

ಪ್ರತ್ಯೇಕ ಪಾಲಿಕೆ ಬೇಡಿಕೆ ನ್ಯಾಯ ಸಮ್ಮತ

ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿ : ಮತ್ತಿಕಟ್ಟಿ

ಧಾರವಾಡ : ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಆಗುವ ನಿಟ್ಟಿನಲ್ಲಿ ಸರಕಾರ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಮಾಜಿ ಸಭಾಪತಿ ವೀರಣ್ಣ ಮತ್ತೀಕಟ್ಟಿ ಆಗ್ರಹಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಅವಳಿ ನಗರ ಪಾಲಿಕೆಯಿಂದ ಧಾರವಾಡಕ್ಕೆ ತಾರತಮ್ಯ ಆಗುತ್ತಿದೆ.ಅಭಿವೃದ್ಧಿಗೆ ಅಗತ್ಯ ಅನುದಾನ ಸಿಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಧಾರವಾಡ ಸೌಕರ್ಯಗಳನ್ನು ಹೊಂದಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಜನರು ಪ್ರತ್ಯೇಕ ಪಾಲಿಕೆ ಬಯಸುತ್ತಿದ್ದಾರೆ. ಈ ದಿಸೆಯಲ್ಲಿ ಈಗಾಗಲೇ ಅನೇಕ ಹೋರಾಟಗಳು ಆರಂಭವಾಗಿವೆ.ತಾವು ಕೂಡ ಪ್ರತ್ಯೇಕ ಪಾಲಿಕೆ ಬೇಕು ಎಂಬ ಬೇಡಿಕೆಯ ಪರವಾಗಿದ್ದು, ಇದು ನ್ಯಾಯಸಮ್ಮತ ಕೂಡ ಎಂದರು.

ಈಗಾಗಲೇ ಸ್ಥಳೀಯ ಜನಪ್ರತಿನಿಧಗಳು ಮಾತ್ರವಲ್ಲದೇ ಮುಖ್ಯಮಂತ್ರಿಗಳಿಗೂ ಸಹ ಮನವಿ ಸಲ್ಲಿಸಲಾಗಿದೆ. ಆದ್ದರಿಂದ ಸರಕಾರ ಬರುವ ನವ್ಹೆಂಬರ ಒಳಗೆ ತೀರ್ಮಾನ ಕೈಕೊಳ್ಳಬೇಕು. ಇಲ್ಲದಿದ್ದರೆ ಈ ವಿಷಯ ತಾರ್ಕಿಕ ಅಂತ್ಯ ಕಾಣುವ ತನಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.

ತಾವು ಸೇರಿದಂತೆ ಕಾಂಗ್ರೆಸ್ ಪಕ್ಷ ಈ ಬೇಡಿಕೆಯ ಪರವಾಗಿ ಹೋರಾಡಲಿದೆ ಎಂದ ಮತ್ತೀಕಟ್ಟಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ, ಮುಖಂಡರಾದ ಡಾ.ಶರಣಪ್ಪ ಕೊಟಗಿ, ವಸಂತ ಅರ್ಕಾಚಾರ, ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯ ಮನೋಜ ಪಾಟೀಲ, ವೆಂಕಟೇಶ ಮಾಚಕನೂರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

administrator

Related Articles

Leave a Reply

Your email address will not be published. Required fields are marked *