ಹುಬ್ಬಳ್ಳಿ-ಧಾರವಾಡ ಸುದ್ದಿ
ಮಿಶನ್ ವಿದ್ಯಾಕಾಶಿ ಯಶಸ್ವಿಗೆ ಪ್ರಯತ್ನ : ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಿಶನ್ ವಿದ್ಯಾಕಾಶಿ ಯಶಸ್ವಿಗೆ ಪ್ರಯತ್ನ : ಜಿಲ್ಲಾಧಿಕಾರಿ ದಿವ್ಯ ಪ್ರಭು

  • ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಕ್ರಮ
  • ಅಧಿಕಾರಿಗಳು, ಶಿಕ್ಷಣ ತಜ್ಞರು, ಎನ್‌ಜಿಒ, ಸಹಕಾರದಲ್ಲಿ ಕಾರ್ಯಕ್ರಮ
  •  ಬಾಲ್ಯವಿವಾಹ, ಬಾಲಕಾರ್ಮಿಕ ಸಮಸ್ಯೆ ನಿವಾರಣೆಗೆ ಆಡಳಿತ ಮುಂದು
  • ಪ್ರಾಥಮಿಕ ಆರೋಗ್ಯ ಕೇಂದ್ರ, ಕಿಮ್ಸ್, ಜಿಲ್ಲಾಸ್ಪತ್ರೆ ಬಲವರ್ಧನೆ
  • ಕೆರೆ ಒತ್ತುವರಿ ತೆರವಿಗೆ ಲ್ಯಾಂಡ್ ಬೀಟ್ ತಂತ್ರಜ್ಞಾನ ಬಳಕೆ
  • ಕಲೆ,ಸಂಗೀತ, ಸಂಸ್ಕೃತಿಯೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ

 

ಧಾರವಾಡ: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ಮೇರೆಗೆ ಕ್ರಮ ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದಲ್ಲಿ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಆಯೋಜಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಶಿಕ್ಷಣಕ್ಕೆ ವಿಶೇಷ ಆದ್ಯತೆ ಎಂದುಕೊಂಡಿದ್ದೇನೆ. ವಿಶೇಷವಾಗಿ ಮಿಶನ್ ವಿದ್ಯಾಕಾಶಿ ಯಶಸ್ವಿಯಾಗಿಸಲು ಪ್ರಯತ್ನ ಮಾಡಲಾಗುತ್ತಿದೆ. ಶೈಕ್ಷಣಿಕ ಅಭಿವೃದ್ಧಿಗೆ ಗ್ರಾಮೀಣ ಮಟ್ಟದಿಂದ ಕೆಲಸ ಮಾಡಬೇಕಿದೆ. ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಡಿಮೆ ಸ್ಥಾನ ಪಡೆದಾಗ ನೋವಾಗಿತ್ತು. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮುಂದಾಗಿದ್ದೇವೆ. ಇದಕ್ಕಾಗಿ ಇಲಾಖೆಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಎನ್‌ಜಿಒ, ಸಹಕಾರದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.


ಜಿಲ್ಲೆಯಲ್ಲಿ ಒಟ್ಟು 32 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಕಿಮ್ಸ್ ಮತ್ತು ಜಿಲ್ಲಾ ಆಸ್ಪತ್ರೆಗಳಿದ್ದು, ಅವುಗಳನ್ನು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯಲ್ಲಿನ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಬಾಲ್ಯವಿವಾಹ, ಬಾಲ್ಯ ಗರ್ಭಧಾರಣೆ, ಬಾಲಕಾರ್ಮಿಕ ಸಮಸ್ಯೆಗಳನ್ನು ನಿವಾರಿಸಲು ಆಡಳಿತ ಮುಂದಾಗಿದೆ. ಅಲ್ಲದೇ ಜಿಲ್ಲೆಯ ಲ್ಲಿನ 1210 ಕೆರೆಗಳ ಪೈಕಿ ಕೆಲವು ಕೆರೆಗಳನ್ನು ಸುಧಾರಿಸಿ ಮಾದರಿ ಕೆರೆಗಳನ್ನಾಗಿ ಪರಿವರ್ತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಕೆರೆ ಒತ್ತುವರಿ ತೆರವಿಗೆ ಲ್ಯಾಂಡ್ ಬೀಟ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.


ಜಿಲ್ಲೆಯಲ್ಲಿನ ಕಲೆ, ಸಂಸ್ಕೃತಿ, ಸಂಗೀತ ವಲಯಗಳ ಉತ್ತೇಜನಕ್ಕೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು. ಇದರೊಟ್ಟಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಸರಕಾರದ ಎಲ್ಲ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಶ್ರಮವಹಿಸಲಾಗುತ್ತಿದೆ ಎಂದರು. ಧಾರವಾಡದಲ್ಲಿ 1.5 ಎಕರೆ ಪ್ರದೇಶದಲ್ಲಿ ಜಿಲ್ಲಾಧಿಕಾರಿ ನೂತನ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ 92 ಕೋ.ರೂ.ಗಳ ಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವರ್ಷ ಅನುದಾನ ಸಿಗುವ ವಿಶ್ವಾಸವಿದೆ ಎಂದರು.
ಡಾ.ಬಸವರಾಜ ಹೊಂಗಲ, ನಿಜಗುಣಿ ದಿಂಡಲಕೊಪ್ಪ ಮತ್ತು ಸದಸ್ಯರು ಇದ್ದರು.

administrator

Related Articles

Leave a Reply

Your email address will not be published. Required fields are marked *