ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಸಿ ಬಾಂಬ್ ಕರೆ: ಹುಬ್ಬಳ್ಳಿ ಖಾಕಿ ಪಡೆ ಹೈಅಲರ್ಟ್

ಪಿಯು ಪರೀಕ್ಷಾ ಕೇಂದ್ರದಲ್ಲಿ ಪರಿಶೀಲನೆ

ಹುಬ್ಬಳ್ಳಿ: ಹುಸಿ ಬಾಂಬ್ ಕರೆ ಹಿನ್ನೆಲೆಯಲ್ಲಿ ನಗರದ ದ್ವಿತೀಯ ಪಿಯು ಪರೀಕ್ಷಾ ಕೇಂದ್ರಕ್ಕೆ ಶ್ವಾನದಳ, ಬಾಂಬ್ ಸ್ಕ್ಯಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಕೆಲ ದಿನದ ಹಿಂದೆ ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೂ ಖಾಕಿ ಪಡೆ ಹೈ ಅಲರ್ಟ್ ಆಗಿದೆ. ಮಹೇಶ ಪಿಯು ಕಾಲೇಜಿನಲ್ಲಿ ತಪಾಸಣೆ ನಡೆಸುತ್ತಿರುವ ಖಾಕಿ ಪಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುತ್ತಿದೆ.


ಇನ್ನೂ ಇದೇ ಕೇಂದ್ರದಲ್ಲಿ ಹಳೇಹುಬ್ಬಳ್ಳಿ ಗಲಭೆಯ ಸ್ಟೇಟಸ್ ರೂವಾರಿ ಎನ್ನಲಾಗಿರುವ ಅಭಿಷೇಕ್ ಹಿರೇಮಠ ಪರೀಕ್ಷೆ ಬರೆಯಲಿದ್ದಾನೆ. ಈ ಹಿನ್ನೆಲೆ ಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

administrator

Related Articles

Leave a Reply

Your email address will not be published. Required fields are marked *