ಗೋವಾ(ವಾಸ್ಕೋ): ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ, ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಅಖಿಲ ಗೋವಾ ಕನ್ನಡ ಮಹಾಸಂಘದ ಆಶ್ರಯದಲ್ಲಿ ವಾಸ್ಕೋ ನಗರದ ಸಾಂಸ್ಕೃತಿಕ ಭವನದಲ್ಲಿ ನಡೆದ ಗಡಿ ನಾಡನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಶಾಸಕ ಕೃಷ್ಣ (ದಾಜಿ) ಸಾಳಕರ, ಗೋವಾದಲ್ಲಿ ಕನ್ನಡ ಭವನ ಕಟ್ಟಲು ಹಾಗೂ ಕನ್ನಡ ಶಾಲೆ ನಿರ್ಮಾಣಕ್ಕೆ ಶ್ರಮಿಸುವೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ, ಗೋವಾದಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿ ರಚಿಸಬೇಕು. ಗೋವಾದ ಕನ್ನಡಿಗರಿಗೆ ಶಕ್ತಿ ತುಂಬಲು ಕನ್ನಡ ಭವನ ಕಟ್ಟಲು ಸೂಕ್ತ ನಿವೇಶನ ನೀಡಬೇಕು. ಬೈನಾ ಬೀಚ್ ವಲಸೆ ಕನ್ನಡಿಗರಿಗೆ ಶಾಶ್ವತ ವಸತಿ ಸೌಲಭ್ಯ ಒದಗಿಸಬೇಕು ಹಾಗೂ ಗೋವಾದಲ್ಲಿ ಕನ್ನಡ ಮತ್ತು ಕೊಂಕಣಿ ಸಾಮರಸ್ಯ ಸಮಾವೇಶ ನಡೆಸಬೇಕು ಎಂದರು.
ಸಾಹಿತ್ಯ ಪರಿಷತ್ ಗೋವಾ ಘಟಕದ ಗೌರವಾಧ್ಯಕ್ಷ ಡಾ.ಸಿದ್ದಣ್ಣ ಮೇಟಿ ಅತಿಥಿಯಾಗಿ ಆಗಮಿಸಿದ್ದರು.
ಇದೇ ಸಂದರ್ಭದಲ್ಲಿ ಗೋವಾ ರಾಜ್ಯದ ಜ್ಞಾನಪೀಠ ಪ್ರಶಸ್ತಿ ಪುರಷ್ಕೃತ ದಾಮೋದರ ಮಾವಚೋ ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಿಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂಧ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಅಖಿಲ ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನಮಂತರೆಡ್ಡಿ ಶಿರೂರ, ಡಾ.ಎಫ್.ಎಸ್.ಶಿವಪ್ರಕಾಶ, ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಶಂಕರ ಕುಂಬಿ, ಹನುಮಂತರೆಡ್ಡಿ ಶಿರೂರ ಇದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ನಿರೂಪಿಸಿದರು. ಡಾ.ಧನವಂತ ಹಜವಗೋಳ ವಂದಿಸಿದರು. ಶಾಲಾ ಮಕ್ಕಳು ಹಚ್ಚೇವು ಕನ್ನಡದ ದೀಪ ಹಾಡಿಗೆ ನೃತ್ಯ ಪ್ರದರ್ಶಿಸಿದರು.