ಹುಬ್ಬಳ್ಳಿ-ಧಾರವಾಡ ಸುದ್ದಿ
ಗಡಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕಿವುಡು

ಗಡಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕಿವುಡು

ಗೋವಾ(ಮಾಸ್ಕೋ): ಕರ್ನಾಟಕ ಹಾಗೂ ಗೋವಾ ಜನರು ಹೃದಯ ವೈಶಾಲ್ಯತೆ ಹೊಂದಿದ್ದಾರೆ. ಆದರೆ ಮಹದಾಯಿ ನೀರು ಹಂಚಿಕೆ ವಿವಾದವನ್ನು ಎರಡು ರಾಜ್ಯಗಳ ಮಂತ್ರಿಗಳು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಕರ್ನಾಟಕದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷೆ ಪ್ರೊ ಮಾಲತಿ ಪಟ್ಟಣಶೆಟ್ಟಿ ಹೇಳಿದರು.


ಅವರು ವಾಸ್ಕೋದ ಶ್ರೀ ರಾಮ ಮಂದಿರದ ಸಾಂಸ್ಕೃತಿಕ ಭವನದಲ್ಲಿ ನಡೆದ ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮದ ಸಮಾರೋಪದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿ, ವಿವಾದ ಬಗೆಹರಿದರೆ ಕನ್ನಡಿಗರು ಮಹಾದಾಯಿ ನೀರು ಕುಡಿಯಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.
ಗಡಿ ಶಾಲೆಗಳ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ಕಿವುಡಾಗಿದೆ. ಬರೀ ಬಾಯಿಮಾತಿನಿಂದ ಪ್ರಯೋಜನವಿಲ್ಲ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಪಠ್ಯಪುಸ್ತಕ ಪುನರ್ ರಚನಾ ಸಮಿತಿಯಕಲ್ಲಿ ಉತ್ತರ ಕರ್ನಾಟಕದವರನ್ನು ನಿರ್ಲಕ್ಷಿಸಿ ಇದ್ದು ಇಂಥ ನಿರ್ಲಕ್ಷ್ಯ ಬೇಡ ಎಂದು ತಾಕೀತು ಮಾಡಿದರು.


ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ. ಡಾ. ಸಿ. ಸೋಮಶೇಖರ ಮಾತನಾಡಿದರು. ಗೋವಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಅಧ್ಯಕ್ಷ ಡಾ. ಸಿದ್ದಣ್ಣ ಮೇಟಿ, ಬಸವಪ್ರಭು ಹೊಸಕೇರಿ, ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಶಿವಾನಂದ ಭಾವಿ ಕಟ್ಟಿ ಇತರರು ವೇದಿಕೆ ಮೇಲಿದ್ದರು.
ಸಮಾರಂಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಉಪಾಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಾಂಸ್ಕೃತಿಕ ಸಂಭ್ರಮದಲ್ಲಿ ವಿವಿಧ ಕಲಾ ತಂಡಗಳು ಮನರಂಜಿಸಿದವು.

administrator

Related Articles

Leave a Reply

Your email address will not be published. Required fields are marked *